ಅಮರಮುಡ್ನೂರು ಗ್ರಾಮದ ದೊಡ್ಡತೋಟ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗೇನ ಚಿತ್ತಸ್ಯ ಯೋಗ ಕೇಂದ್ರ ವತಿಯಿಂದ ಒಂದು ತಿಂಗಳ ಯೋಗ ಶಿಬಿರ ಸಂತೋಷ್ ಮುಂಡಕಜೆ ನೇತೃತ್ವದಲ್ಲಿ ನಡೆಯಲಿರುವುದು.
ಅಮರಮುಡ್ನೂರು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪದ್ಮಪ್ರಿಯ ಮೇಲ್ತೋಟ ರವರು ಯೋಗ ಶಿಬಿರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮೂವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾವಣೆ ಮಾಡಿಕೊಂಡರು. ಶಾಲಾ ಮುಖ್ಯೋಪಾಧ್ಯಾಯರಾದ ಬಾಬು. ಕೆ ಶುಭಹಾರೈಸಿದರು.
ಎಸ್.ಡಿ.ಎಂ.ಸಿ ಅಧ್ಯಕ್ಷ ಹೇಮಚಂದ್ರ ನಂದಗೋಕುಲ ಉಪಸ್ಥಿತರಿದ್ದರು. ಯೋಗ ಗುರು ಸಂತೋಷ್ ಮುಂಡಕಜೆ ಶಿಬಿರದ ಉದ್ದೇಶವನ್ನು ತಿಳಿಸಿದರು.