ಗ್ರಾಮಗಳ ಸಂಪರ್ಕ ರಸ್ತೆ ಅಭಿವೃದ್ಧಿಗೆ ಆದ್ಯತೆ : ಎಸ್. ಅಂಗಾರ
ರಾಜ್ಯ ಸರಕಾರದ ಪ್ರಾಕೃತಿಕ ವಿಕೋಪ ನಿಧಿಯಿಂದ 20 ಲಕ್ಷ ರೂ.ಅನುದಾನದಡಿ ಕುಂಡಡ್ಕ-ಚೆನ್ನಾವರ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ಜ.4 ರಂದು ನಡೆಯಿತು.
ಮೀನುಗಾರಿಕೆ, ಒಳನಾಡು ಹಾಗೂ ಬಂದರು ಮತ್ತು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಗ್ರಾಮದ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಸರಕಾರ ಹಂತ ಹಂತವಾಗಿ ಅನುದಾನ ಒದಗಿಸುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುತ್ತಿದೆ. ಉತ್ತಮ ರಸ್ತೆ ನಿರ್ಮಾಣಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ದ.ಕ.ಸಂಸದ ನಳಿನ್ ಕುಮಾರ್ ಕಟೀಲು, ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು,ಜಿಲ್ಲಾ ವಕ್ಪ್ ಬೋರ್ಡ್ ಸದಸ್ಯ ಇಸ್ಮಾಯಿಲ್ ಕಾನಾವು, ಜಿ.ಪಂ.ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಪೆರುವಾಜೆ ಜಲದುರ್ಗಾದೇವಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಮಾಜಿ ಅಧ್ಯಕ್ಷ ಉಮೇಶ್ ಕೆಎಂಬಿ, ಚೆನ್ನಾವರ ಮುಹಿಯಿದ್ದಿನ್ ಜುಮಾ ಮಸೀದಿ ಅಧ್ಯಕ್ಷ ಶಾಫಿ ಚೆನ್ನಾವರ, ಮುಕ್ಕೂರು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಧಾಕರ ರೈ ಕುಂಜಾಡಿ, ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯದ ಆಡಳಿತ ಮೊಕ್ತೇಸರ ಬಾಲಚಂದ್ರ ರಾವ್ ಕೊಂಡೆಪ್ಪಾಡಿ, ಅಕ್ರಮ-ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಗ್ರಾ.ಪಂ.ಮಾಜಿ ಸದಸ್ಯ ಚನಿಯ ಕುಂಡಡ್ಕ, ಮುಕ್ಕೂರು ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಜಯಂತ ಕುಂಡಡ್ಕ, ಮುಕ್ಕೂರು ಜ್ಯೋತಿ ಯುವಕ ಮಂಡಲದ ಅಧ್ಯಕ್ಷ ಸತ್ಯ ಪ್ರಸಾದ್ ಕಂಡಿಪ್ಪಾಡಿ, ದಯಾನಂದ ರೈ ಕನ್ನೆಜಾಲು, ದಾಮೋದರ ಗೌಡ ತೋಟ, ಶರೀಪ್ ಕುಂಡಡ್ಕ ಮೊದಲಾದವರು ಉಪಸ್ಥಿತರಿದ್ದರು. ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯದ ಆಡಳಿತ ಸಮಿತಿ ಸದಸ್ಯ ಕುಶಾಲಪ್ಪ ಗೌಡ ಪೆರುವಾಜೆ ಪ್ರಸ್ತಾವನೆಗೈದು ಸ್ವಾಗತಿಸಿದರು. ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯ ನಾರಾಯಣ ಕೊಂಡೆಪ್ಪಾಡಿ ವಂದಿಸಿದರು.