ಕಾನಾವು-ತೋಟದಮೂಲೆ ಸಂಪರ್ಕ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

Advt_Headding_Middle

 

ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಬೇಕು : ಸಂಸದ ನಳಿನ್

ರಾಜ್ಯ ಸರಕಾರದ ಪ್ರಾಕೃತಿಕ ವಿಕೋಪ ನಿಧಿಯಿಂದ 30 ಲಕ್ಷ ರೂ.ಅನುದಾನದಡಿ ಕುಂಜಾಡಿ- ಕಾನಾವು-ತೋಟದಮೂಲೆ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ಜ.4 ರಂದು ನಡೆಯಿತು.

ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಸಾರ್ವಜನಿಕ ಅಗತ್ಯತೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸರಕಾರವು ವಿವಿಧ ಹಂತಗಳಲ್ಲಿ ಅನುದಾನ ಒದಗಿಸುತ್ತಿದ್ದು ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಮೀನುಗಾರಿಕೆ, ಒಳನಾಡು ಹಾಗೂ ಬಂದರು ಮತ್ತು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು,ಜಿಲ್ಲಾ ವಕ್ಪ್ ಬೋರ್ಡ್ ಸದಸ್ಯ ಇಸ್ಮಾಯಿಲ್ ಕಾನಾವು, ಜಿ.ಪಂ.ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಪೆರುವಾಜೆ ಜಲದುರ್ಗಾದೇವಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಮಾಜಿ ಅಧ್ಯಕ್ಷ ಉಮೇಶ್ ಕೆಎಂಬಿ, ಪ್ರಗತಿಪರ ಕೃಷಿಕರಾದ ಗೋಪಾಲಕೃಷ್ಣ ಭಟ್ ಕಾನಾವು, ತಿರುಮಲೇಶ್ವರ ಭಟ್ ಕಾನಾವು, ಗೋಪಾಲಕೃಷ್ಣ ಭಟ್ ಮನವಳಿಕೆ, ಬಿ.ಕೆ.ರಮೇಶ್, ಡಾ.ಶಶಿಧರ ಕಾನಾವು, ಚೆನ್ನಾವರ ಮುಹಿಯಿದ್ದಿನ್ ಜುಮಾ ಮಸೀದಿ ಅಧ್ಯಕ್ಷ ಶಾಫಿ ಚೆ‌ನ್ನಾವರ, ಮುಕ್ಕೂರು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಧಾಕರ ರೈ ಕುಂಜಾಡಿ, ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯದ ಆಡಳಿತ ಮೊಕ್ತೇಸರ ಬಾಲಚಂದ್ರ ರಾವ್ ಕೊಂಡೆಪ್ಪಾಡಿ, ಅಕ್ರಮ-ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಮುಕ್ಕೂರು ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಜಯಂತ ಕುಂಡಡ್ಕ, ಮುಕ್ಕೂರು ಜ್ಯೋತಿ ಯುವಕ ಮಂಡಲದ ಅಧ್ಯಕ್ಷ ಸತ್ಯಪ್ರಸಾದ್ ಕಂಡಿಪ್ಪಾಡಿ, ದಯಾನಂದ ರೈ ಕನ್ನೆಜಾಲು, ಬಾಲಪ್ಪ ಪೂಜಾರಿ, ನಾಗೇಶ್ ರೈ, ದಾಮೋದರ ಗೌಡ ತೋಟ, ಸಂಜೀವ ಗೌಡ ಬೀರುಸಾಗು, ಲೋಕೇಶ್ ಬೀರುಸಾಗು, ದಿವಾಕರ ಬೀರುಸಾಗು, ಶರೀಪ್ ಕುಂಡಡ್ಕ ಮೊದಲಾದವರು ಉಪಸ್ಥಿತರಿದ್ದರು. ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯದ ಆಡಳಿತ ಸಮಿತಿ ಸದಸ್ಯ ಕುಶಾಲಪ್ಪ ಗೌಡ ಪೆರುವಾಜೆ ಪ್ರಸ್ತಾವನೆಗೈದು ಸ್ವಾಗತಿಸಿದರು. ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯ ನಾರಾಯಣ ಕೊಂಡೆಪ್ಪಾಡಿ ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.