Breaking News

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದಿನಿಂದ ಸೇವೆಗೆ ಅವಕಾಶವಿಲ್ಲ , ದರ್ಶನಕ್ಕೆ ಮಾತ್ರ  ಅವಕಾಶ

Advt_Headding_Middle

 

 

ದೇಶದಾದ್ಯಂತ ಮತ್ತು ರಾಜ್ಯಾದ್ಯಂತ ಓಮಿಕ್ರಾನ್ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರದ ಆದೇಶದಂತೆ ಮುಂದಿನ ಆದೇಶದವರೆಗೆ ಇಂದಿನಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳನ್ನು ರದ್ದು ಮಾಡಲಾಗಿದೆ‌.

ಶ್ರೀ ದೇವಳಕ್ಕೆ ಬರುವ ಭಕ್ತಾದಿಗಳಗೆ ಒಂದು ಬಾರಿಗೆ 50 ಮಂದಿಗೆ ಮಾತ್ರ ಶ್ರೀ ದೇವರ ದರ್ಶನಕ್ಕೆ ಮಾತ್ರ ಅವಕಾಶವಿರುತ್ತದೆ ಹಾಗೂ ವಾರಾಂತ್ಯದ ಶುಕ್ರವಾರ ರಾತ್ರಿ ಗಂಟೆ 10ರಿಂದ ಸೋಮವಾರ ಬೆಳಗ್ಗೆ ಗಂಟೆ 8ರ ವರೆಗೆ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುವುದರಿಂದ ಶನಿವಾರ ಮತ್ತು ರವಿವಾರಗಳಂದು ಶ್ರೀ ದೇವರ ದರ್ಶನಕ್ಕೆ ಕೂಡಾ ಅವಕಾಶವಿರುವುದಿಲ್ಲ. ಎರಡು ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಂಡ ಭಕ್ತಾದಿಗಳಿಗೆ ಮಾತ್ರ ಶ್ರೀ ದೇವರ ದರ್ಶನಕ್ಕೆ ಅವಕಾಶವಿರುವುದಾಗಿದ್ದು, ಶ್ರೀ ದೇವರ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಖಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಮತ್ತಿತರ ಕೋವಿಡ್ ನಿಯಂತ್ರಣದ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ದೇವರ ದರ್ಶನವನ್ನು ಪಡೆಯಬಹುದಾಗಿದೆ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.