Breaking News

ಕೊಡಗು ಸಂಪಾಜೆ : ರತ್ನಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Advt_Headding_Middle

ಕೊಡಗು ಸಂಪಾಜೆ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಯೋಜನೆಯಲ್ಲಿ ರತ್ನಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವವು  06 ರಂದು ಕೊಯನಾಡು ಶ್ರೀ ಗಣೇಶ ಕಲಾಮಂದಿರದಲ್ಲಿ ಶ್ರೀಮತಿ ಮೀನಕುಮಾರಿ ಕೆ. ಸಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಮಾರಂಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿರ್ಮಲ ಭರತ್ ರವರು ದೀಪಬೆಳಗಿ ಕಾರ್ಯಕ್ರಮಕ್ಕೆ ಪ್ರೋತ್ಸಾಹಿಸಿದರು, ಕಾರ್ಯಕ್ರಮದಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ಜಗದೀಶ್ ಪರಮಲೆ, ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕಾರದ ಹರೀಶ್, ಜ್ಞಾನವಿಕಾಸ ಸಮನ್ವಯಧಿಕಾರಿ ಕುಮಾರಿ ಶ್ರೇಯ ಒಕ್ಕೂಟದ ಅಧ್ಯಕ್ಷೆ ಪುಷ್ಪಾವತಿ ರೈ ಉಪಸ್ಥಿತರಿದ್ದರು, ಗ್ರಾಮದ ಬೆಳ್ಳಚಿಯವರು ಗಣ್ಯರನ್ನು ಸ್ವಾಗತಿಸಿ, ಸೇವಾಪ್ರತಿನಿಧಿ ಪುಷ್ಪವತಿ ವಿಶ್ವನಾಥ್ ವಾರ್ಷಿಕ ವರದಿ ವಾಚಿಸಿದರು. ಜಲಜ ಚಂದ್ರಶೇಖರ್  ವಂದಿಸಿದರು. ನಿರೂಪಣೆಯನ್ನು  ಶ್ರೇಯ ನೆರವೇರಿಸಿದರು. ನಂತರ ಕೇಂದ್ರ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ಸಮಾರಂಭದಲ್ಲಿ ಊರಿನ ಹಿರಿಯರು, ವಿವಿಧ ಒಕ್ಕೂಟಗಳ ಮಹಿಳಾ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಬಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.