ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ನ 2021-22ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷೆ ಶೀಲಾವತಿ ಬೊಳ್ಳಾಜೆಯವರ ಅಧ್ಯಕ್ಷತೆಯಲ್ಲಿ ಇಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಎಂ.ಲೀಲಾವತಿ ವರದಿ ಮಂಡಿಸಿದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸುಳ್ಯ ಇದರ ಸಹಾಯಕ ಕಾರ್ಯಪಾಲಕ ಅಭಿಯಂತರರು ನೋಡೆಲ್ ಅಧಿಕಾರಿಯಾಗಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷ ಧನಂಜಯ ಕುಮಾರ್ ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಸಭೆಯಲ್ಲಿ ಗ್ರಾಮಸ್ಥರು ಪಾಲ್ಗೊಂಡರು.