ಸುಳ್ಯದಲ್ಲಿ ವೀಕೆಂಡ್ ಕರ್ಫ್ಯೂ : ಅಗತ್ಯ ಸೇವೆಗಳು ಅಬಾಧಿತ

Advt_Headding_Middle

ಕೊರೋನಾ ಹಾಗೂ ಓಮಿಕ್ರಾನ್ ಪ್ರಕರಣಗಳ ಹೆಚ್ಚಳ ಹಿನ್ನಲೆಯಲ್ಲಿ ರಾಜ್ಯಾದ್ಯಂತ ನಿನ್ನೆ ರಾತ್ರಿಯಿಂದ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಸುಳ್ಯದಲ್ಲೂ ಇದರ ಪರಿಣಾಮ ಕಂಡುಬಂದಿದೆ. ಸೋಮವಾರ ಬೆಳಿಗ್ಗೆ ೫ರವರೆಗೆ ಕರ್ಫ್ಯೂ ಜಾರಿಯಲ್ಲಿದ್ದು, ಅಗತ್ಯ ಸೇವೆ ಹೊರತುಪಡಿಸಿ ಉಳಿದೆಲ್ಲವೂ ಬಂದ್ ಆಗಲಿವೆ ತುರ್ತು ಅಗತ್ಯ ಇದ್ದರೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಹಾಲು, ಔಷಧ, ಹಣ್ಣು, ತರಕಾರಿ, ದಿನಸಿ ಸಾಮಾಗ್ರಿ ಸೇರಿದಂತೆ ಅಗತ್ಯ ವಸ್ತುಗಳನ್ನು ಹೊರತುಪಪಡಿಸಿ ಇತರ ಯಾವುದೇ ಸೇವೆಗಳಿಗೆ ಅವಕಾಶವಿಲ್ಲ. ತುರ್ತು ಸೇವೆ ಹಾಗೂ ಸರಕಾರಿ ಸೇವೆಗಳಿಗೆ ಹೋಗುವವರು ಗುರುತಿನ ಚೀಟಿ ತೋರಿಸಿ ಸಂಚರಿಸಬಹುದಾಗಿದೆ. ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಪಾರ್ಸೆಲ್‌ಗೆ ಅವಕಾಶ. ಸುಳ್ಯದಲ್ಲಿ ಅಗತ್ಯ ಸೇವೆಗಳ ಅಂಗಡಿಗಳು ಎಂದಿನಂತೆ ತೆರೆದಿವೆ. ವಾಹನಗಳ ಸಂಚಾರ ಕಂಡುಬರುತ್ತಿದ್ದರೂ ಜನಸಂಚಾರ ವಿರಳವಾಗಿದೆ. ಸರಕಾರಿ ಬಸ್‌ಗಳು ಓಡಾಟಕ್ಕೆ ಸಿದ್ಧವಾಗಿದ್ದರೂ ಜನಸಂಚಾರ ಕಡಿಮೆಯಾಗಿರುವುದರಿಂದ ಬಸ್ ಸಂಚಾರವೂ ವಿರಳವಾಗಿದೆ. ಖಾಸಗಿ ಬಸ್, ವ್ಯಾನ್‌ಗಳು ಓಡಾಟ ನಡೆಸುತ್ತಿವೆ. ಸರಕಾರಿ ಕಚೇರಿಗಳು, ಶಾಲಾ ಕಾಲೇಜುಗಳು ಬಂದ್ ಆಗಿವೆ. ಮದ್ಯ ಮಾರಾಟ ನಿಷೇಧಿಸಲಾಗಿದೆ. ಹೋಟೆಲ್‌ಗಳು ತೆರೆದಿದ್ದರೂ ಪಾರ್ಸೆಲ್‌ಗಳಿಗೆ ಮಾತ್ರ ಅವಕಾಶವಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.