ಮೇಕೆದಾಟು “ನೀರಿಗಾಗಿ ನಡಿಗೆ” ಪಾದಯಾತ್ರೆ ಯಶಸ್ವಿ ಗೆ ಸುಳ್ಯ ಕಾಂಗ್ರೆಸ್ ವತಿಯಿಂದ ಪಯಸ್ವಿನಿ ನದಿಗೆ ಬಾಗಿನ ಅರ್ಪಣೆ

Advt_Headding_Middle
Advt_Headding_Middle

 

ಮೇಕೆದಾಟು “ನೀರಿಗಾಗಿ ನಡಿಗೆ” ಪಾದಯಾತ್ರೆ ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿ ಸುಳ್ಯದ ಕಾಂಗ್ರೆಸ್ ವತಿಯಿಂದ ರಾಜ್ಯದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರವರ ನೇತೃತ್ವದಲ್ಲಿ ನಡೆಯುತ್ತಿರುವ ಮೇಕೆದಾಟು ನೀರಿಗಾಗಿ ನಡಿಗೆ 10 ದಿನಗಳ ಬೃಹತ್ ಪಾದಯಾತ್ರೆ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸುವ ಸಲುವಾಗಿ ಹಾಗೂ ಸುಳ್ಯ ನಗರ ಪಂಚಾಯತ್ ನ ಹಲವಾರು ವರ್ಷಗಳ ಶುದ್ಧ ಕುಡಿಯುವ ನೀರಿನ ಯೋಜನೆಯು ಆದಷ್ಟು ಬೇಗ ಕಾರ್ಯರೂಪಕ್ಕೆ ತರುವ ಹೋರಾಟದ ಆರಂಭದ ಪ್ರಯುಕ್ತ ಸುಳ್ಯ ಕಾಂಗ್ರೆಸ್ ನಾಯಕರು ಅರಂಬೂರಿನ ಪಾಲಡ್ಕ ಬಳಿ ಪಯಸ್ವಿನಿ ನದಿಗೆ ಬಾಗಿನ ಅರ್ಪಿಸಿದರು.

ಈ ಸಂದರ್ಭದಲ್ಲಿ ಸರ್ವ ಧರ್ಮದ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಜಯಪ್ರಕಾಶ್ ರೈ ಎನ್., ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ. ಜಯರಾಮ್, ನಗರ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಂಶುದ್ದಿನ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್. ಗಂಗಾಧರ್, ನಗರ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ ಎಂ.ಜೆ.,ಇಂಟಕ್ ವಿಧಾನ ಸಭಾ ಕ್ಷೇತ್ರ ಅಧ್ಯಕ್ಷರಾದ ಶಾಫಿ ಕುತ್ತಮೊಟ್ಟೆ, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ನಾಯಕ ಮಹಮ್ಮದ್ ಕುಂಞಿ ಗೂನಡ್ಕ,ಬ್ಲಾಕ್ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಭವಾನಿಶಂಕರ್ ಕಲ್ಮಡ್ಕ, ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಸುರೇಶ್ ಎಂ.ಹೆಚ್., ನಗರ ಪಂಚಾಯತ್ ಸದಸ್ಯ ಡೇವಿಡ್ ಧೀರಾ ಕ್ರಾಸ್ತ, ಮಾಜಿ ಸದಸ್ಯೆ ಜೂಲಿಯಾನ ಕ್ರಾಸ್ತಾ, ಕಾಂಗ್ರೆಸ್ ಹಿರಿಯ ನಾಯಕ ಬಾಪು ಸಾಹೇಬ್, ರಾಧಾಕೃಷ್ಣ ಪರಿವಾರಕಾನ, ಅನಿಲ್ ಬಳ್ಳಡ್ಕ, ಗಣೇಶ್ ಬೀರಮಂಗಲ, ರವಿಚಂದ್ರ ತೊಡಿಕಾನ, ಎನ್.ಎಸ್.ಯು.ಐ. ಅಧ್ಯಕ್ಷ ಕೀರ್ತನ್ ಕೊಡಪಾಲ, ಶವಾದ್ ಗೂನಡ್ಕ, ರಾಬರ್ಟ್ ಡಿಸೋಜ, ರಾಜು ಪಂಡಿತ್, ಗಂಗಾಧರ್ ಮೇನಾಲ ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಬ್ಲಾಕ್ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಗೋಕುಲ್ ದಾಸ್ ಸಂಯೋಜಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.