ಕೆ.ವಿ.ಜಿ. ಅಮರಜ್ಯೋತಿ ಪಿ.ಯು. ಕಾಲೇಜು ವಾರ್ಷಿಕೋತ್ಸವ

Advt_Headding_Middle

ಸುಳ್ಯದ ಕೆ.ವಿ.ಜಿ. ಅಮರಜ್ಯೋತಿ ಪಿ.ಯು. ಕಾಲೇಜಿನ ವಾರ್ಷಿಕೋತ್ಸವ ಜ. 8ರಂದು ನಡೆಯಿತು. ಮಾಜಿ ಎಂ.ಎಲ್.ಸಿ. ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಅತಿಥಿಯಾಗಿ ಭಾಗವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಪ್ರಧಾನ ಕಾರ್ಯದರ್ಶಿ, ಕೆ.ವಿ.ಜಿ. ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾಪ್ರಸಾದ್ ರನ್ನು ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷರಾಗಿ ಚುನಾಯಿತರಾದ ನೆಲೆಯಲ್ಲಿ ಸನ್ಮಾನಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ನಿರ್ದೇಶಕಿ ಡಾ‌. ಜ್ಯೋತಿ ಆರ್ ಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲೆ ಡಾ. ಯಶೋಧ ರಾಮಚಂದ್ರ ಕಾಲೇಜಿನ ವರದಿ ವಾಚಿಸಿದರು. ಕೊರೊನಾ ತುರ್ತು ಪರಿಸ್ಥಿತಿಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಕೆ.ವಿ.ಜಿ. ಡೆಂಟಲ್ ಕಾಲೇಜಿನ ಉದ್ಯೋಗಿ ವಿಶ್ವನಾಥ ಕುಂಚಡ್ಕರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾಲೇಜಿನ ವಿಶೇಷ ಪ್ರತಿಭೆ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿನಿ ಕು. ಶುಭದಾ ಆರ್. ಪ್ರಕಾಶ್ ರನ್ನು ವಿಶೇಷವಾಗಿ ಗೌರವಿಸಲಾಯಿತು. ಕಳೆದ ಪಿ.ಯು.ಸಿ. ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಕಾಲೇಜಿನ ಉಪಪ್ರಾಂಶುಪಾಲ ದೀಪಕ್ ವೈ.ಆರ್. ಸ್ವಾಗತಿಸಿ ಶ್ರೀಮತಿ ಕವಿತಾ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ರಾತ್ರಿ ಭೋಜನದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.