ಭ್ರಷ್ಟಾಚಾರ ವಿರೋಧಿ ಫಲಕ ಬಿಡುಗಡೆಗೊಳಿಸಿದ ಸಚಿವ ಎಸ್. ಅಂಗಾರ

Advt_Headding_Middle
Advt_Headding_Middle

 

ಭ್ರಷ್ಟಾಚಾರ ವಿರೋಧದ ಸುದ್ದಿ ಬಳಗದ ಆಂದೋಲನಕ್ಕೆ ಸಂಪೂರ್ಣ ಸಹಕಾರದ ಭರವಸೆ

ಸುದ್ದಿ ಬಿಡುಗಡೆ ಪತ್ರಿಕಾ ಬಳಗ ಹಮ್ಮಿಕೊಂಡಿರುವ ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಸುಳ್ಯ ಶಾಸಕ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದ್ದಾರೆ.

 


ಸುದ್ದಿ ಮಾಹಿತಿ ಟ್ರಸ್ಟ್ ಮತ್ತು ಸುದ್ದಿ ಜನಾಂದೋಲನ ವೇದಿಕೆ ವತಿಯಿಂದ ಹೊರತರಲಾಗಿರುವ ಲಂಚ, ಭ್ರಷ್ಟಾಚಾರಕ್ಕೆ ಬಹಿಷ್ಕಾರ, ಉತ್ತಮ ಸೇವೆಗೆ ಪುರಸ್ಕಾರ ಸ್ಟಿಕ್ಕರನ್ನು ಜ.9ರಂದು ಪಂಜದಲ್ಲಿ ಸಚಿವರು ಬಿಡುಗಡೆಗೊಳಿಸಿದರು. ಸುದ್ದಿ ಬಳಗ ಹಮ್ಮಿಕೊಂಡಿರುವ ಈ ಕಾರ್ಯಕ್ರಮಕ್ಕೆ ನನ್ನ ಸಂಪೂರ್ಣ ಸಹಕಾರವಿದೆ. ಮುಂದೆ ಈ ಹೋರಾಟಕ್ಕೆ ನಮ್ಮ ಕಡೆಯಿಂದ ನೀಡಬೇಕಾದ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ಸಚಿವರು ಹೇಳಿದರು. ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ.ಯು.ಪಿ.ಶಿವಾನಂದ, ಹಿರಿಯರಾದ ಡಾ.ರಾಮಯ್ಯ ಭಟ್ ಪಂಜ, ಪಂಜ ಮಹಾಮ್ಮಾಯ ಪೆಟ್ರೋಲ್ ಬಂಕ್ ಪಾಲುದಾರ ಮೋನಪ್ಪ ನಾಯ್ಕ ಸೌದಾಮಿನಿ, ಸುದ್ದಿ ಚಾನೆಲ್ ವಿಭಾಗ ಮುಖ್ಯಸ್ಥ ದುರ್ಗಾಕುಮಾರ್ ನಾಯರ್‌ಕೆರೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.