Breaking News

ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿದ್ದ ಮಡಪ್ಪಾಡಿ ಗ್ರಾಮ ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೆ 11 ರಂದು ಗುದ್ದಲಿ ಪೂಜೆ

Advt_Headding_Middle

 

ಜಿಲ್ಲಾ ಪತ್ರಕರ್ತರ ಸಂಘದ ಪ್ರಯತ್ನದಿಂದ ರಸ್ತೆ ಅಭಿವೃದ್ಧಿಗೆ 1.5ಕೋಟಿ ಅನುದಾನ

ಸುಳ್ಯ:ಮಡಪ್ಪಾಡಿ ಗ್ರಾಮವನ್ನು ಸಂಪರ್ಕಿಸುವ ಸೇವಾಜೆ- ಮಡಪ್ಪಾಡಿ ರಸ್ತೆ ಅಭಿವೃದ್ಧಿಗೆ ಜ.11ರಂದು ಗುದ್ದಲಿಪೂಜೆ ನೆರವೇರಲಿದೆ. ಸುಳ್ಯ ಶಾಸಕ, ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಲಿದ್ದಾರೆ. ಸೇವಾಜೆಯಲ್ಲಿ ಗುದ್ದಲಿ ಪೂಜೆ ನೆರವೇರಲಿದೆ ಎಂದು ತಿಳಿದು ಬಂದಿದೆ. ಜ.11ರಂದು ಬೆಳಿಗ್ಗೆ.9.30ಕ್ಕೆ ರಸ್ತೆಯ ಗುದ್ದಲಿ ಪೂಜೆ ನಡೆಯಲಿದೆ ಎಂದು
ಸಚಿವ ಅಂಗಾರ ಅವರು ತಿಳಿಸಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಗ್ರಾಮ ವಾಸ್ತವ್ಯ ಮಾಡಿದ ಗ್ರಾಮ ಮಡಪ್ಪಾಡಿ. 2020 ಜನವರಿ 5 ರಂದು ಗ್ರಾಮ ವಾಸ್ತವ್ಯ ಮಾಡಿದ ಸಂದರ್ಭದಲ್ಲಿ ಮಡಪ್ಪಾಡಿ ಗ್ರಾಮದ ಸಂಪರ್ಕ ರಸ್ತೆ ಅಭಿವೃದ್ಧಿ ಮಾಡಬೇಕು ಎಂಬುದು ಜನರಿಂದ ಕೇಳಿ ಬಂದ ಪ್ರಮುಖ ಬೇಡಿಕೆಯಾಗಿತ್ತು. ಬಳಿಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗ ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರನ್ನು ಭೇಟಿ ಮಾಡಿ ಮಡಪ್ಪಾಡಿಯ ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸಬೇಕು ಎಂದು ಮನವಿ ಸಲ್ಲಿಸಲಾಗಿತ್ತು. ಕೂಡಲೇ ಸ್ಪಂದಿಸಿದ ಸಚಿವ ಕೆ.ಎಸ್.ಈಶ್ವರಪ್ಪ ಅವರು 1.5ಕೋಟಿ ಅನುದಾನ ಬಿಡುಗಡೆ ಮಾಡಿದ್ದರು. ಇದೀಗ ರಸ್ತೆಯ ಟೆಂಡರ್ ಪ್ರಕ್ರಿಯೆ ಪೂರ್ತಿಯಾಗಿದ್ದು ಗುದ್ದಲಿ ಪೂಜೆಗೆ ಮುಹೂರ್ತ ಫಿಕ್ಸ್ ಆಗಿದೆ. ಎಲಿಮಲೆಯಿಂದ ಮಡಪ್ಪಾಡಿಗೆ 9 ಕಿ.ಮಿ.ದೂರವಿದೆ. ಎಲೆಮಲೆ- ಅರಂತೋಡು ಲೋಕೋಯೋಗಿ ರಸ್ತೆಯ ಸೇವಾಜೆಯಿಂದ ಮಡಪ್ಪಾಡಿಗೆ 5 ಕಿ.ಮಿ.ದೂರ ಇದೆ. ಇದರಲ್ಲಿ 1.5 ಕಿ.ಮಿ. ರಸ್ತೆ ಅಭಿವೃದ್ಧಿಯಾಗಿದೆ. ಉಳಿದ 3.5 ಕಿ.ಮಿ. ರಸ್ತೆ ಸಂಪೂರ್ಣ ಎಕ್ಕುಟ್ಟಿ ಹೋಗಿದೆ. ಇದೀಗ ಗ್ರಾಮೀಣಾಭಿವೃದ್ಧಿ ಇಲಾಖೆ ನೀಡಿದ ಈ ಅನುದಾನದಲ್ಲಿ ರಸ್ತೆಯ 3.5 ಕಿ.ಮಿ. ಅಭಿವೃದ್ಧಿಯಾಗಲಿದೆ ಎಂದು ತಿಳಿದು ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.