*ಎನ್.ಎಸ್.ದೇವಿಪ್ರಸಾದ್ ಸಂಪಾಜೆ ಅಸ್ತಂಗತ*

Advt_Headding_Middle
Advt_Headding_Middle

ಸಾಹಿತಿ, ನಾಟಕಕಾರ, ಅರೆಭಾಷೆ ಅಕಾಡೆಮಿ ಪ್ರಥಮ ಅಧ್ಯಕ್ಷ ಎನ್.ಎಸ್.ದೇವಿಪ್ರಸಾದ್ ಸಂಪಾಜೆಯವರು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು.
ಸಂಪಾಜೆ ಜೂನಿಯರ್ ಕಾಲೇಜ್ ಸಂಚಾಲಕರಾಗಿದ್ದ ಅವರು ಸಂಪಾಜೆಯ ಪಂಚಲಿಂಗೇಶ್ವರ ದೇವಸ್ಥಾನದ ಮೊಕ್ಥಸರರಾಗಿದ್ದರು. ಕೆಲವು ವರ್ಷಗಳ ಹಿಂದೆ ಸುಳ್ಯದಿಂದ ಮಂಗಳೂರು ವರೆಗೆ ಅಮರಕ್ರಾಂತಿ ಕಾಲ್ನಡಿಗೆ ಜಾಥಾ ಏರ್ಪಡಿಸಿದ್ದ ದೇವಿಪ್ರಸಾದರು ಅದಕ್ಕಿಂತ ಮೊದಲು ನಿರ್ಮಿಸಿದ್ದ ಚಲನಚಿತ್ರ ರಾಷ್ಟ್ರ ಪ್ರಶಸ್ತಿ ಪಡೆದಿತ್ತು.
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರೂ ಆಗಿದ್ದ ಅವರು ಕೊಡಗು ಪ್ರಜಾ ವೇದಿಕೆಯ ಅಧ್ಯಕ್ಷರಾಗಿ ಕೊಡಗು ಪ್ರತ್ಯೇಕ ರಾಜ್ಯ ಬೇಡಿಕೆಯ ವಿರುದ್ಧ ಹೋರಾಟ ಸಂಘಟಿಸಿದ್ದರು.
ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದಿದ್ದ ಅವರು ಕಳೆದ ಸೋಮವಾರ ಅರೆಭಾಷೆ ಅಕಾಡೆಮಿಯ ಗೌರವ ಪ್ರಶಸ್ತಿಗೆ ಪಾತ್ರರಾಗಿದ್ದರು.
ಇಂದು ಕೊನೆಯುಸಿರೆಳೆದಿರುವ ಎನ್.ಎಸ್.ದೇವಿಪ್ರಸಾದರು ಪತ್ನಿ, ಇಬ್ಬರು ಪುತ್ರಿಯರು, ಅಲಕಿಯ, ಸೊಸೆ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ..

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.