ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸುಜ್ಞಾನ ನಿಧಿ ಶಿಷ್ಯ ವೇತನ ಮತ್ತು ಜ್ಞಾನ ದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ

Advt_Headding_Middle
Advt_Headding_Middle

 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸುಳ್ಯ ತಾಲೂಕು ಇದರ ವತಿಯಿಂದ ತಾಲೂಕಿನ‌ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯ ವೇತನ ಮತ್ತು ತಾಲೂಕಿನ 33 ಶಾಲೆಗಳಿಗೆ ಜ್ಞಾನ ದೀಪ ಶಿಕ್ಷಕರಿಗೆ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಜ.12 ರಂದು ಸುಳ್ಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಛೇರಿಯಲ್ಲಿ ನಡೆಯಿತು.


ಸಮಾರಂಭದ ಅಧ್ಯಕ್ಷತೆಯನ್ನು ಪ್ರಗತಿ ಬಂಧು ಸ್ವ ಸಹಾಯ ಸಂಘದ‌ ಕೇಂದ್ರ ಸಮಿತಿ ಅಧ್ಯಕ್ಷ ಯತೀಶ್ ರೈ ದುಗಲಡ್ಕ ರವರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಭವಾನಿಶಂಕರ ರವರು ಉದ್ಘಾಟಿಸಿದರು. ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಎನ್.ಎ.ರಾಮಚಂದ್ರ, ‌ನ್ಯಾಯವಾದಿ ಎಂ.ವೆಂಕಪ್ಪ ಗೌಡ , ಯೋಜನೆಯ ಪ್ರಾದೇಶಿಕ ನಿರ್ದೇಶಕ ಪ್ರವೀಣ್ ಕುಮಾರ್,‌ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಕೇಂದ್ರದ ಶಿಕ್ಷಕಿ ಶ್ರೀಮತಿ ಚಂದ್ರಮತಿ, ‌ಯೋಜನಾಧಿಕಾರಿ ಚೆನ್ನಕೇಶವ, ಜನಜಾಗೃತಿ ವೇದಿಕೆಯ ಸದಸ್ಯರಾದ ಬೂಡು ರಾಧಾಕೃಷ್ಣ ರೈ, ಪದ್ಮನಾಭ ಶೆಟ್ಟಿ ಯವರು ‌ಉಪಸ್ಥಿತರಿದ್ದರು.


ತಾಲೂಕಿನ ಸುಮಾರು ‌33 ಸರಕಾರಿ ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರಿಗೆ ಮಂಜೂರಾತಿ ಪತ್ರ ವಿತರಿಸಲಾಯಿತು. ಸರಕಾರಿ ಶಾಲೆಯ ಬಡಕುಟುಂಬದ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯ ವೇತನ ವಿತರಿಸಲಾಯಿತು.
ಶ್ರೀಮತಿ ಸುನೀತಾ ಪ್ರಾ ರ್ಥಿಸಿದರು. ಯೋಜನಾಧಿಕಾರಿ ಚೆನ್ನಕೇಶವ ರವರು ಸ್ವಾಗತಿಸಿದರು. ಯೋಜನೆಯ ಪ್ರಾದೇಶಿಕ ನಿರ್ದೇಶಕ ಪ್ರವೀಣ್ ಕುಮಾರ್ ಪ್ರಾಸ್ತಾವಿಕ ಮಾತನಾಡಿದರು. ಮೇಲ್ವಿಚಾರಕ ನವೀನ್ ವಂದಿಸಿದರು. ಮೇಲ್ವಿಚಾರಕಿ ಹೇಮಲತಾ ಕಾರ್ಯಕ್ರಮ ನಿರೂಪಿಸಿದರು. ಸಂಘದ ಸದಸ್ಯರು,ವಿದ್ಯಾರ್ಥಿಗಳ ಪೋಷಕರು, ಶಿಕ್ಷಕರು, ಯೋಜನೆಯ ಮೇಲ್ವಿಚಾರಕರು, ಸಿಬ್ಬಂದಿ ವರ್ಗದವರು ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.