ಅಜ್ಜಾವರ ಗ್ರಾಮ ಪಂಚಾಯತ್ ವತಿಯಿಂದ ವಿಶೇಷ ಗ್ರಾಮ ಸಭೆ ಜ.12 ರಂದು ಮೇನಾಲದ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಸತ್ಯವತಿ ಬಸವನಪಾದೆ ವಹಿಸಿದ್ದರು. ನೋಡೆಲ್ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ದೀಪಿಕಾ ಭಾಗವಹಿಸಿದ್ದರು.
ಪಂಚಾಯತ್ ಪಿಡಿಓ ಜಯಮಾಲ ವರದಿ ವಾಚಿಸಿದರು. ಸಭೆಯಲ್ಲಿ ಮುಂಡೋಳಿಮೂಲೆ ಉದ್ದಂತಡ್ಕ ರಸ್ತೆ ಅಭಿವೃದ್ಧಿಯ ಬಗ್ಗೆ ಮತ್ತು ಗ್ರಾಮದ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಮಾಡುವ ಆಶ್ವಾಸನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರುಗಳು, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು, ಪಂಚಾಯತ್ ಸಿಬ್ಬಂದಿವರ್ಗದವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಲೀಲಾ, ದೀಪಿಕಾ, ಪಂಚಾಯತ್ ಪಿಡಿಓ ಜಯಮಾಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಿಡಿಓ ಜಯಮಾಲ ಸ್ವಾಗತಿಸಿ ವಂದಿಸಿದರು.