Breaking News

ಆರೋಪಿ ಹಮ್ಜಾರಿಗೆ ಸುಳ್ಯ ನ್ಯಾಯಾಲಯದಿಂದ ಜೈಲು ಶಿಕ್ಷೆ

Advt_Headding_Middle

ಆಲೆಟ್ಟಿ ಗ್ರಾಮದ ಅರಂಬೂರು ಎಂಬಲ್ಲಿ ಮಾಣಿ ಮೈಸೂರು ಹೆದ್ದಾರಿಯಲ್ಲಿ ದುಡುಕುತನ ಹಾಗೂ ಅಜಾಗರೂಕತೆಯಿಂದ ತನ್ನ ಜೀಪನ್ನು ಚಲಾಯಿಸಿ ಸುಳ್ಯ ಕಡೆಯಿಂದ ಸಂಪಾಜೆ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ನಿವೃತ್ತ ಎ ಎಸ್ ಐ ಅಣ್ಣಯ್ಯ ಗೌಡ ಅವರ ಸಾವಿಗೆ ಕಾರಣವಾಗಿದ್ದ ಆರೋಪಿ ಹಮ್ಜಾರವರಿಗೆ ಸುಳ್ಯ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸೋಮಶೇಖರ್ ಅವರು ಎರಡು ವರ್ಷ ಜೈಲಶಿಕ್ಷೆ ಹಾಗೂ ರೂಪಾಯಿ ಹತ್ತು ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
೨೦೧೯ರಲ್ಲಿ ಆಗಿನ ಎಸ್ ಐ ಹರೀಶ್ ಯಮ್ ಆರ್ ಆರೋಪಿ ಹಮ್ಜಾ ವಿರುದ್ಧ ಎ ಫ್ ಐ ಆರ್ ದಾಖಲಿಸಿಕೊಂಡಿದ್ದರು ಆಗಿನ ವೃತ್ತ ನಿರೀಕ್ಷಕರಾದ ಸತೀಶ್ ಕುಮಾರ್ ಆರ್ ಆರೋಪಿಯ ವಿರುಧ್ದ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹಿರಿಯ ನ್ಯಾಯಾಧೀಶರಾದ ಸೋಮಶೇಖರ್ ಅವರು ಆರೋಪಿಯ ಆರೋಪ ಸಾಬೀತಾಗಿದೆ ಎಂದು ಹೇಳಿ ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಅಭಿಯೋಜನೆ ಪರವಾಗಿ ಸುಳ್ಯದ ಸಹಾಯಕ ಸರಕಾರಿ ಅಭಿಯೋಜಕ ಜನಾರ್ದನರವರು ಸಾಕ್ಷಿಗಳ ವಿಚಾರಣೆ ನಡೆಸಿ ವಾದವನ್ನು ಮಂಡಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.