ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ಸಹಾಯ ಧನ

Advt_Headding_Middle
Advt_Headding_Middle

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸುಬ್ರಹ್ಮಣ್ಯ ಘಟಕದ ಗೃಹರಕ್ಷಕ ದಿ|| ಅಜಿತ್ ಯು.ರವರು ಇತ್ತೀಚೆಗೆ ಆಕಸ್ಮಿಕವಾಗಿ ಮೃತಪಟ್ಟಿದ್ದು, ಇವರ ಕುಟುಂಬದವರಿಗೆ ಕೇಂದ್ರ ಕಛೇರಿಯಿಂದ ಗೃಹರಕ್ಷಕರ ಕ್ಷೇಮಾಭಿವೃದ್ಧಿ ನಿಧಿಯಿಂದ ಸಹಾಯ ಧನನೀಡಲಾಯಿತು. ಜ.೧೨ರಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿ, ಮೇರಿಹಿಲ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ಸುಬ್ರಹ್ಮಣ್ಯ ಘಟಕದ ಪ್ರಭಾರ ಘಟಕಾಧಿಕಾರಿ ಹರೀಶ್ಚಂದ್ರರವರಿಗೆ ರೂ. ೧೦,೦೦೦ ಮೌಲ್ಯದ ಚೆಕ್ ನೀಡಿದರು.
ಈ ಸಂದರ್ಭದಲ್ಲಿ ಕಛೇರಿಯ ಉಪಸಮಾದೇಷ್ಟರಾದ ರಮೇಶ್, ಅಧೀಕ್ಷಕರಾದ ರತ್ನಾಕರ್, ಪ್ರಥಮ ದರ್ಜಿ ಸಹಾಯಕಿ ಅನಿತಾ ಟಿ.ಎಸ್, ಉಪ್ಪಿನಂಗಡಿ ಘಟಕದ ಪ್ರಭಾರ ಘಟಕಾಧಿಕಾರಿ ದಿನೇಶ್ , ಮುಲ್ಕಿ ಘಟಕದ ಪ್ರಭಾರ ಘಟಕಾಧಿಕಾರಿ ಲೋಕೇಶ್, ಸುನೀಲ್ ಕುಮಾರ್ (ಸಾರ್ಜೆಂಟ್), ಗೃಹರಕ್ಷಕರಾದ ಸುಲೋಚನಾ, ಜಯಲಕ್ಷ್ಮಿ, ದಿವಾಕರ್, ಜಯಂತ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.