ಸುಳ್ಯ ನಗರ ಪಂಚಾಯತ್‌ಗೆ ಜಿಲ್ಲಾಧಿಕಾರಿ ಭೇಟಿ: ಅಧಿಕಾರಿ, ಸಿಬ್ಬಂದಿಗಳನ್ನು ತೀವ್ರ ತರಾಟೆಗೆತ್ತಿಕೊಂಡ ಡಿಸಿ

Advt_Headding_Middle
Advt_Headding_Middle

 

 

ಸುಳ್ಯ ನಗರ ಪಂಚಾಯತ್‌ಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಜ.14ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರ ಪಂಚಾಯತ್ ಕಚೇರಿಯ ಅವ್ಯವಸ್ಥೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಅವರು ನಗರ ಪಂಚಾಯತ್ ಮುಖ್ಯಾಧಿಕಾರಿ, ಇಂಜಿನಿಯರ್, ಆರೋಗ್ಯಾಧಿಕಾರಿ ಸೇರಿದಂತೆ‌ ಎಲ್ಲಾ ಅಧಿಕಾರಿ ಹಾಗು ಸಿಬ್ಬಂದಿಗಳನ್ನು ತೀವ್ರ ತರಾಟಗೆತ್ತಿಕೊಂಡರು.

ನಗರ ಪಂಚಾಯತ್ ಅಧಿಕಾರಿ ಮತ್ತು ಸಿಬ್ಬಂದಿಗಳ ಟೇಬಲ್ ಗಳಲ್ಲಿ ಕಡತಗಳ ರಾಶಿ ಬಿದ್ದದ್ದನ್ನು ಕಂಡು ಅಧಿಕಾರಿಗಳನ್ನು ತೀವ್ರ ರೀತಿಯಲ್ಲಿ ತರಾಟೆಗೆ ತೆಗೆದುಕೊಂಡರು.
ನಗರ ಪಂಚಾಯತ್ ಅವರಣದ ಬಳಿ ಇದ್ದ ಕಸದರಾಶಿಯ ಬಗ್ಗೆ ಪಂಚಾಯತ್ ಆಡಳಿತದ ಮಾಹಿತಿ ಪಡೆದುಕೊಂಡರು ಇದರ ಬಗ್ಗೆ ಸಭೆಯಲ್ಲಿ ಚರ್ಚಿಸುತ್ತೆನೆ ಎಂದು ಹೇಳಿದರು.
ಅಧಿಕಾರಿ ಮತ್ತು ಸಿಬ್ಬಂದಿಗಳ ಚೇಂಬರ್‌ಗೆ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಅಸಮರ್ಪಕ ವ್ಯವಸ್ಥೆಯ ಬಗ್ಗೆ ತೀವ್ರ ತರಾಟೆಗೆತ್ತಿಕೊಂಡರು. ಜಿಲ್ಲಾಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳಿಂದ ಸಮರ್ಪಕ ಉತ್ತರ ನೀಡಲು ಸಾಧ್ಯವಾಗಿಲ್ಲ. ಅಧಿಕಾರಿಗಳ,ಸಿಬ್ಬಂದಿಗಳಿಗೆ ಚಾಟಿ ಬೀಸಿದರು. ಸಾರ್ವಜನಿಕರಿಂದಲೂ ಕೆಲವು ದೂರುಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು ನಗರ ಪಂಚಾಯತ್‌ ಆಡಳಿತಕ್ಕೆ ಬಿಸಿ ಮುಟ್ಟಿಸಿದರು. ಬಳಿಕ ಜನಪ್ರತಿನಿಧಿ ಹಾಗು ಅಧಿಕಾರಿಗಳ ಸಭೆ ನಡೆಸಿದರು. ನಗರ ಪಂಚಾಯತ್ ವಿನಯಕುಮಾರ್ ಕಂದಡ್ಕ, ತಹಶೀಲ್ದಾರ್ ಅನಿತಾಲಕ್ಷ್ಮಿ , ನಗರ ಕೋಶ ಯೋಜನ ನಿರ್ದೇಶಕಿ ಗಾಯತ್ರಿ ನಾಯಕ್, ಕಂದಾಯ ಅಧಿಕಾರಿ ಕೊರಗಪ್ಪ ಹೆಗ್ಡೆ, ಸಹಾಯಕ ಕಾರ್ಯಪಾಲಕ ಅಭಿಯಂತ ಅರುಣ್‌ ಕುಮಾರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.