ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ, ಪೊಲೀಸ್ ಇಲಾಖೆ, ಸುಳ್ಯ ಸುದ್ದಿ ಸಮೂಹ ಮಾಧ್ಯಮ ಹಾಗೂ ವಿವೇಕಾನಂದ ವಿದ್ಯಾಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಯುವಸಪ್ತಾಹ ಕಾರ್ಯಕ್ರಮವು ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಜ.17ರಂದು ಬೆಳಿಗ್ಗೆ ಜರುಗಲಿದೆ.
ಕಾರ್ಯಕ್ರಮವನ್ನು ಸುಳ್ಯದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷ ಸೋಮಶೇಖರ್ ಎ. ಅವರು ಉದ್ಘಾಟಿಸಲಿದ್ದಾರೆ. ವಿವೇಕಾನಂದ ವಿದ್ಯಾಸಂಸ್ಥೆಯ ಸಂಚಾಲಕ ಸುಧಾಕರ ಕಾಮತ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಸುಳ್ಯದ ಸಹಾಯಕ ಸರ್ಕಾರಿ ಅಭಿಯೋಜಕರಾದ ಜನಾರ್ದನ ಬಿ. ಅವರು ಸ್ವಾಮಿ ವಿವೇಕಾನಂದರ ಜೀವನ ತತ್ವಗಳ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ , ಯುವಸಪ್ತಾಹದಲ್ಲಿ ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸುಳ್ಯದ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ವಿವೇಕಾನಂದ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಶ್ಯಾಮ್ ಪ್ರಸಾದ್ ಅಡ್ಡಂತಡ್ಕ ಉಪಸ್ಥಿತರಿರಲಿದ್ದಾರೆ.