ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಆಯೋಜಿಸಲ್ಪಡುತ್ತಿರುವ ಇನ್ಸ್ಪ ಯರ್ ಅವಾರ್ಡ್ ಕಾರ್ಯಕ್ರಮದಲ್ಲಿ ಸುಳ್ಯದ ಸಂತ ಜೋಸೆಫರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ಇಂಚರಾ ಪಿ.ಆರ್. ಆಯ್ಕೆಯಾಗಿರುತ್ತಾರೆ. ಈಕೆ ಶಾಲೆಯ ವಿಜ್ಞಾನ ಶಿಕ್ಷಕಿ ಶ್ರೀಮತಿ ಸವಿತಾ .ಎಂ. ಮತ್ತು ಶ್ರೀಮತಿ ಕಲಾವತಿಯವರ ಮಾರ್ಗದರ್ಶನದಲ್ಲಿ ವಿಜ್ಞಾನ ಮಾದರಿ ತಯಾರಿಸಿ ಪ್ರದರ್ಶಿಸಲಿದ್ದಾರೆ.