ಇಂದು ಬೆಳಿಗ್ಗೆ ಉಗ್ರಾಣ ಮುಹೂರ್ತ
ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆಯು ಜ.16 ರಂದು ಪ್ರಾರಂಭಗೊಂಡಿತು.
ಬೆಳಗ್ಗೆ ಶ್ರೀ ಕ್ಷೇತ್ರದ ನಾಗನಕಟ್ಟೆಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಅವರು ಶ್ರೀ ಜಲದುರ್ಗಾದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ನಂತರ ಉಗ್ರಾಣ ಮುಹೂರ್ತ ನಡೆಯಿತು. ಸಂಜೆ ಧ್ವಜಾರೋಹಣ ನಡೆದು ಜ.21 ರ ತನಕ ಜಾತ್ರೆ ನಡೆಯಲಿದೆ.
ಈ ಸಂದರ್ಭದಲ್ಲಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಪ್ರಮುಖರಾದ ಅಮರನಾಥ ಶೆಟ್ಟಿ ಪೆರುವಾಜೆಗುತ್ತು, ಬೋಜರಾಜ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪಿ.ವೆಂಕಟಕೃಷ್ಣ ರಾವ್, ಜಯಪ್ರಕಾಶ್ ರೈ, ಪಿ.ಜಗನ್ನಾಥ ರೈ, ದಾಮೋದರ ನಾಯ್ಕ, ನಾರಾಯಣ ಕೊಂಡೆಪ್ಪಾಡಿ, ಭಾಗ್ಯಲಕ್ಷ್ಮೀ ಅರ್ನಾಡಿ, ಯಶೋಧಾ ಎ.ಎಸ್, ಕಾರ್ಯದರ್ಶಿ ವಸಂತ ಪೆರುವಾಜೆ ಮೊದಲಾದವರು ಉಪಸ್ಥಿತರಿದ್ದರು.