ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯದಲ್ಲಿ ಸ್ಪರ್ಧಾ ಪರೀಕ್ಷೆಗಳ ವಿಷಯಕ್ಕೆ ಸಂಬಂಧಿಸಿದಂತೆ ಜ. ರಂದು ಮಾಹಿತಿ ಕಾರ್ಯಾಗಾರ ನಡೆಯಿತು.
ವಿದ್ಯಾಮಾತಾ ಅಕಾಡೆಮಿಯ ಸ್ಥಾಪಕರಾದ ಶ್ರೀ ಬಾಗ್ಯೇಶ್ ರೈ ಹಾಗೆಯೇ ತರಬೇತುದಾರರು ಶ್ರೀ ಅರವಿಂದ ಚೊಕ್ಕಾಡಿ ಇವರು ಮಾಹಿತಿಯನ್ನು ನೀಡಿದರು. ಹಾಗೆಯೇ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಗೋವಿಂದ ಎನ್.ಎಸ್. ಇವರು ಉದ್ಘಾಟಿಸಿದರು. ಕಾರ್ಯಾಗಾರದಲ್ಲಿ ಹೆಚ್.ಆರ್ ಮತ್ತು ಪ್ಲೇಸ್ಮೆಂಟ್ ಘಟಕದ ಸಂಯೋಜಕರಾದ ಶ್ರೀಯುತ ವಿನ್ಯಾಸ್ ಹೊಸಳಿಕೆ ಮತ್ತು ಘಟಕದ ವಿದ್ಯಾರ್ಥಿ ನಾಯಕರಾದ ಸಾಕ್ಷತ್ ಇವರು ಉಪಸ್ಥಿತರಿದ್ದರು.