ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಜನವರಿ 18ರಂದು ಏರ್ಪಡಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಂ. ಕೂಸಪ್ಪ ಗೌಡ ಮುಗುಪ್ಪು ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಸಹಕಾರ ಭಾರತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣ ಕುಂಪದವು ಉಪಸ್ಥಿತರಿದ್ದರು. ಮಂಗಳೂರು ವಿಭಾಗ ಸೇವಾ ಪ್ರಮುಖರಾದ ಸುಭಾಶ್ಚಂದ್ರ ಪಿ.ಬಿ ದೀಪ ಬೆಳಗಿಸಿ ಪುಷ್ಪಾರ್ಚನೆಗೈದು ಮಾತನಾಡುತ್ತಾ ಸಹಕಾರ ಕ್ಷೇತ್ರದ ಮೂಲಕ ದೇಶದ ಅರ್ಥವ್ಯವಸ್ಥೆಗೆ ಗುಣಾತ್ಮಕ ಫಲಿತಾಂಶ ನೀಡುವ ಹಿನ್ನೆಲೆಯಲ್ಲಿ ಸಹಕಾರ ಭಾರತಿ ಸಂಸ್ಥಾಪಕ ಲಕ್ಷ್ಮಣರಾವ್ ಇನಾಮ್ದಾರ್ ಅವರ ಮಾರ್ಗದರ್ಶನದಲ್ಲಿ 1978 ಸೆಪ್ಟೆಂಬರ್ 15ರಂದು ಸಹಕಾರ ಭಾರತಿ ಜನ್ಮತಾಳಿತು ಎಂದರು. ಪ್ರತಿವರ್ಷ ಜನವರಿ ತಿಂಗಳ 12 ರಿಂದ 18 ರವರೆಗೆ ಸಹಕಾರ ಭಾರತಿ ಸಂಸ್ಥಾಪನಾ ದಿನಾಚರಣೆಯನ್ನು ಮಾಡುವುದು. ಸಹಕಾರ ಭಾರತಿ ಸಂಘಟನೆ ಸಹಕಾರಿ ಕ್ಷೇತ್ರದ ಅಭಿವೃದ್ಧಿ ಮತ್ತು ಆಧುನೀಕರಣಕ್ಕೆ ರಾಷ್ಟ್ರವ್ಯಾಪಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ಹೇಳಿದರು.
ಕೃಷ್ಣ ಕುಂಪದವು ಮಾತನಾಡಿ ದೇಶದ ಅಭಿವೃದ್ಧಿಯಲ್ಲಿ ಸಹಕಾರಿ ಸಂಘಗಳ ಕೊಡುಗೆ ಅನನ್ಯ ಎಂದರು. ಸಹಕಾರ ಭಾರತಿ ತಾಲೂಕು ಕಾರ್ಯದರ್ಶಿ ಭಾಸ್ಕರ್ ರಾವ್ ಅವರು ಧನ್ಯವಾದ ನೆರವೇರಿಸಿದರು. ಕಾರ್ಯಕ್ರಮವನ್ನು ಸುದರ್ಶನ ಪಾತಿಕಲ್ಲು ನಿರೂಪಿಸಿದರು.