ದೀಪೋತ್ಸವ, ವಸಂತಕಟ್ಟೆ ಪೂಜೆ
ಸುದ್ದಿ ಯೂಟ್ಯೂಬ್ ಚಾನೆಲ್ ನಲ್ಲಿ ನೇರಪ್ರಸಾರ
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜಾತ್ರೋತ್ಸವವು ಭಕ್ತಿ,ಸಂಭ್ರಮದಿಂದ ನಡೆಯುತ್ತಿದ್ದು ಜ.18 ರಂದು ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ, ದೀಪೋತ್ಸವ, ವಸಂತ ಕಟ್ಟೆ ಪೂಜೆ ನಡೆಯಿತು.
ಬೆಳಿಗ್ಗೆ ನಡೆದ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಉಳ್ಳಾಕುಲು ದೈವದ ಭಂಡಾರ ಆಗಮನ,ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ,ಮತ್ತು ರಾತ್ರಿ ನಡೆದ ದೇವರ ಬಲಿ ಉತ್ಸವ,ದೀಪೋತ್ಸವ, ವಸಂತಕಟ್ಟೆ ಪೂಜೆಯನ್ನು ಸುದ್ದಿ ಸುಳ್ಯ ಯೂಟ್ಯೂಬ್ ಚಾನೆಲ್ ಮತ್ತು ಫೇಸ್ ಬುಕ್ ಪೇಜ್ ನಲ್ಲಿ ನೇರಪ್ರಸಾರ ಮಾಡಲಾಯಿತು. ಸಾವಿರಾರು ಜನರು ನೇರಪ್ರಸಾರವನ್ನು ವೀಕ್ಷಿಸಿದರು.
ರಾತ್ರಿ ದೇವಸ್ಥಾನದ ಎದುರಿನ ಮೈದಾನದಲ್ಲಿ ಜ್ಞಾನಶಕ್ತಿ ಸುಬ್ರಹಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಯಕ್ಷಗಾನ ಬಯಲಾಟ ” ಶ್ರೀಹರಿ ದರ್ಶನ ” ನಡೆಯಿತು.