ಸುಳ್ಯ ನ್ಯಾಯಾಲಯದ ನಾಲ್ವರು ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲಾಗಿದೆ.
ಕೋರ್ಟಿನ ಒಳಾಂಗಣಕ್ಕೆ ಯಾರಿಗೂ ಪ್ರವೇಶವನ್ನು ನೀಡದೆ ಕಲಾಪಗಳಲ್ಲಿ ಭಾಗವಹಿಸುವವರು ಕೋವಿಡ್ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.
ಮಾನ್ಯ ಉಚ್ಚ ನ್ಯಾಯಾಲಯದ ಹಾಗೂ ಸರ್ಕಾರದ ಆದೇಶದಂತೆ ನಿಯಮಾವಳಿಗಳನ್ನು ಸುಳ್ಯ ನ್ಯಾಯಾಲಯದಲ್ಲಿ ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತಿದೆ.