ಸುಳ್ಯದಲ್ಲಿ ಸಮರ್ಪಣಾ ಸಮಾವೇಶ
ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಗೆಲುವು ಸಾಧಿಸಿ ನಾಲ್ಕನೇ ಬಾರಿ ನಿರ್ದೇಶಕರಾಗಿ ಆಯ್ಕೆಗೊಂಡು ಇದೀಗ ಒಕ್ಕಲಿಗರ ಸಮಘದ ಉಪಾಧ್ಯಕ್ಷರಾಗಿ ಚುನಾಯಿತರಾದ ಡಾ.ಕೆ.ವಿ.ರೇಣುಕಾಪ್ರಸಾದರಿಗೆ ಅಭಿನಂದನೆ ಹಾಗೂ ಅವರ ಚುನಾವಣಾ ಗೆಲುವಿಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸುವ ಸಮರ್ಪಣಾ ಸಮಾವೇಶ ಸುಳ್ಯದ ಅಮರಶ್ರೀ ಭಾಗ್ನ ಜಾನಕಿ ವೆಂಕಟ್ರಮಣ ಸಭಾಂಗಣದಲ್ಲಿ ನಡೆಯುತ್ತಿದೆ.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಸಮಾರಂಭವನ್ನು ದೀಪ ಬೆಳಗಿಸಿ, ಉದ್ಘಾಟಿಸಿದರಲ್ಲದೆ, ಡಾ.ಕೆ.ವಿ.ರೇಣುಕಾಪ್ರಸಾದ್ ಅವರನ್ನು ಸನ್ಮಾನಿಸಿದರು. ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ಎಪಿಎಂ.ಸಿ ಮಾಜಿ ಅಧ್ಯಕ್ಷ ಜಾಕೆ ಮಾಧವ ಗೌಡ, ಮಾಜಿ ಜಿ.ಪಂ. ಸದಸ್ಯರಾದ ಎಸ್.ಎನ್.ಮನ್ಮಥ ಸಮಾರಂಭದ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಭರತ್ಮುಂಡೋಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದಿನೇಶ್ ಮಡ್ತಿಲ ಸ್ವಾಗತಿಸಿದರು. ಭವಾನಿಶಂಕರ ಅಡ್ತಲೆ ಮತ್ತು ಡಾ.ಯಶೋಧ ರಾಮಚಂದ್ರ ಕಾರ್ಯಕ್ರಮ ನಿರೂಪಿಸಿದರು.