ಸುಳ್ಯದ ಕೊಡಿಯಾಲಬೈಲಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಯ ಡಿ.ದೇವರಾಜ ಅರಸು ಭವನ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಮತ್ತು ಕುರುಂಜಿಭಾಗ್ ನಲ್ಲಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಇದರ ಮೇಲಂತಸ್ತಿನ ನೂತನ ಕಟ್ಟಡಗಳ ಉದ್ಘಾಟನೆ ಯು ಜ.21 ರಂದು ನಡೆಯಿತು.
ಮೀನುಗಾರಿಕಾ ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ ಕುರುಂಜಿಭಾಗ್ ನ ಕಟ್ಟಡವನ್ನು ಉದ್ಘಾಟಿಸಿದರೆ, ನ.ಪಂ. ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಕೊಡಿಯಾಲಬೈಲಿನ ದೇವರಾಜು ಅರಸು ಭವನವನ್ನು ಲೋಕಾರ್ಪಣೆ ಗೈದರು.
ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್, ನಗರ ಪಂಚಾಯತ್ ಉಪಾಧ್ಯಕ್ಷೆ ಸರೋಜಿನಿ ಪೆಲತಡ್ಕ,, ಉಬರಡ್ಕ ಗ್ರಾ.ಪಂ. ಉಪಾಧ್ಯಕ್ಷ ಪ್ರಶಾಂತ್ ಪಾನತ್ತಿಲ, ಉಬರಡ್ಕ ಗ್ರಾ.ಪಂ. ಸದಸ್ಯೆ ಮಮತಾ ಕುದ್ಪಾಜೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕು ಕಲ್ಯಾಣಾಧಿಕಾರಿ ಶ್ರೀಮತಿ ಶುಭಾ ಎ, ದಕ್ಷಿಣ ಕಮ್ನಡ ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಂದ್ರ ಕಲ್ಬಾವಿ ವೇದಿಕೆಯಲ್ಲಿ ಇದ್ದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಚಿನ್ ಕುಮಾರ್ ಸ್ವಾಗತಿಸಿದರು.