ಸುಳ್ಯ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಪೇರಾಲು ಅವರನ್ನು ನೇಮಕಗೊಳಿಸಿ ಜಿಲ್ಲಾಧ್ಯಕ್ಷರಾದ ಡಾ.ಶ್ರೀನಾಥ್ ಎಂ.ಪಿ. ಆದೇಶ ಹೊರಡಿಸಿದ್ದಾರೆ.
ಚಂದ್ರಶೇಖರ ಪೇರಾಲು ಅವರು ಕಳೆದ ಅವಧಿಯಲ್ಲಿ ತಾಲೂಕು ಕ.ಸಾ.ಪ. ಗೌರವ ಕಾರ್ಯದರ್ಶಿ ಆಗಿದ್ದರಲ್ಲದೆ ಸುವಿಚಾರ ಸಾಹಿತ್ಯ ವೇದಿಕೆಯ ಮೂಲಕ ಸಾಹಿತ್ಯ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದ್ದರು. ಇತ್ತೀಚೆಗಷ್ಟೆ ಸರಕಾರಿ ಸೇವೆಯಿಂದ ನಿವೃತ್ತರಾಗಿದ್ದ ಅವರು ಕ.ಸಾ.ಪ. ಅಧ್ಯಕ್ಷರಾಗಬೇಕೆಂದು ಸುಳ್ಯದಲ್ಲಿ ಕಸಾಪ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದರು.