ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಚುನಾವಣಾ ಸಾಕ್ಷರತಾ ಸಂಘದ ನೇತೃತ್ವದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು.
ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಾಮುಖ್ಯತೆಯ ಬಗ್ಗೆ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರು ಹಾಗೂ ELC ಸಂಘದ ಸಂಚಾಲಕಿ ಶ್ರೀಮತಿ ಮಮತ ಕೆ. ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ರುದ್ರಕುಮಾರ್ ಎಂ.ಎಂ. ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಬೋಧಕ, ಬೋಧಕೇತರ ವರ್ಗ, ವಿದ್ಯಾರ್ಥಿ ಸಮೂಹವು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.