ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸದಸ್ಯರಾಗಿ ಹರಿಪ್ರಸಾದ ಪೆರಿಯಪ್ಪು ನೇಮಕಗೊಂಡಿದ್ದಾರೆ.
ಸಮುದಾಯಕ್ಕೆ ನಿರಂತರವಾಗಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ 2022-2023 ರ ಕೇಂದ್ರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಮಹಾಸಭಾಧ್ಯಕ್ಷರಾದ ಅಶೋಕ ಹಾರನಹಳ್ಳಿ ಇವರು ನೇಮಕಗೊಳಿಸಿದ್ದಾರೆ.
ಸುಳ್ಯ ತಾಲ್ಲೂಕು ಕಲ್ಮಡ್ಕ ಗ್ರಾಮದ ಪೆರಿಯಪ್ಪು ನಿವಾಸಿಯಾಗಿರುವ ಇವರು ಕೃಷಿಕರು. ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ಆಡಳಿತ ಸಮಿತಿಯ ಸದಸ್ಯರಾಗಿ ಸಾರ್ವಜನಿಕ ಸೇವೆ ಆರಂಭಿಸಿ ಪ್ರಕೃತ ಶ್ರೀ ರಾಮಚಂದ್ರಾಪುರ ಮಠದ ಆಡಳಿತ ವ್ಯವಸ್ಥೆಯಲ್ಲಿ ಪ್ರಮುಖರಾಗಿರುತ್ತಾರೆ. ಮಂಗಳೂರಿನಲ್ಲಿ ಕೆಲ ವರ್ಷಗಳ ಹಿಂದೆ ,ದೇಶದ 1380 ಕ್ಕೂ ಅಧಿಕ ಸಂತರು ಏಕಕಾಲದಲ್ಲಿ ವೇದಿಕೆಯಲ್ಲಿ ಒಟ್ಟಾಗಿ ಸೇರಿದ, ಲಕ್ಷಾಧಿಕ ಗೋಪ್ರೇಮಿಗಳು ಸೇರಿ ನಡೆದ ಮಂಗಲ ಗೋಯಾತ್ರಾ ಮಹಾಮಂಗಲ ಕಾರ್ಯಕ್ರಮದ ಪ್ರಧಾನ ಸಂಚಾಲಕರು. ಕಳೆದ ವರ್ಷ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶ ಸಮಿತಿಯ ಸಕ್ರಿಯ ಸದಸ್ಯರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.
ಹೊಸನಗರ ಶ್ರೀ ರಾಮಚಂದ್ರಾಪುರ ಮಠ, ಶ್ರೀ ಚಂದ್ರಮೌಳೀಶ್ವರ ದೇವಾಲಯ ಪ್ರಕಲ್ಪ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.