ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ 10 ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪರೀಕ್ಷೆಯನ್ನು ಜ. 26ರಂದು ನಡೆಸಲಾಯಿತು. ಕಾಲೇಜಿನ ಪ್ರಾಂಶಪಾಲರಾದ ಡಾ. ಯಶೋದ ರಾಮಚಂದ್ರ ರವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ.ರೇಣುಕಾ ಪ್ರಸಾದ್ ಕೆ ವಿಯವರು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಪರೀಕ್ಷೆಯಲ್ಲಿ 150ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗಹಿಸಿದ್ದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.