,
ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಮೂರುಕಲ್ಲಡ್ಕ ಇದರ ಆಶ್ರಯದಲ್ಲಿ ನಡೆಯುವ ಅಯ್ಯನಕಟ್ಟೆ ಜಾತ್ರೋತ್ಸವವು ಜ. 26ರಂದು ಆರಂಭಗೊಂಡಿದೆ.
ಕನ್ನಡ ಕೋಗಿಲೆ ಖ್ಯಾತಿಯ ಶ್ರೀಮತಿ ಕಲಾವತಿ ದಯಾನಂದರವರ ಕಲಾ ಸಿಂಧು ಸಂಗೀತ ಬಳಗ ಉಡುಪಿ ಇವರಿಂದ ಸುಗಮ ಸಂಗೀತ ಜ. 27ರಂದು ನಡೆಯಿತು.
28ರಂದು ಬೆಳಗಿನ ಜಾವ 5.00 ಗಂಟೆಗೆ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಡಲಿದೆ. ಪ್ರಾತಃಕಾಲ 7.00ರಿಂದ ಕಲ್ಲಮಾಡದಲ್ಲಿ ಉಳ್ಳಾಕುಲು ಶ್ರೀ ಮುಡಿ ದೈವಗಳ ನೇಮೋತ್ಸವ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ. ಜ. 29ರಂದು ಬೆಳಿಗ್ಗೆ 7.30ಕ್ಕೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ ಹೊರಡುವುದು ಬೆಳಿಗ್ಗೆ 8.00 ಗಂಟೆಗೆ ಕಳಂಜ ಗುತ್ತಿನಿಂದ ಧೂಮಾವತಿ ದೈವದ ಭಂಡಾರ ಹೊರಡುವುದು ಬಾಳಿಲ ಮೂರುಕಲ್ಲಡ್ಕ ದೈವಸ್ಥಾನದಿಂದ ಕೊಡಮಣಿತ್ತಾಯ ದೈವದ ಭಂಡಾರ ಹೊರಟು ಬೆಳಿಗ್ಗೆ 10.00 ಗಂಟೆಯಿಂದ ಕಲ್ಲಮಾಡದ ಬಳಿ ಶಿರಾಡಿ, ಧೂಮಾವತಿ ಮತ್ತು ಕೊಡಮಣಿತ್ತಾಯ ದೈವಗಳ ನೇಮೋತ್ಸವ ಜರಗಲಿದೆ. ಮಧ್ಯಾಹ್ನ ಪ್ರಸಾದ ವಿತರಣೆ, ಅನ್ನಸಂತರ್ಪಣೆ ಬಳಿಕ ಅಪರಾಹ್ನ 2.30 ಕ್ಕೆ ಕಲ್ಲಮಾಡದ ಬಳಿ ಶಿರಾಡಿ ದೈವದ ದೊಂಪದ ಬಲಿ ಉತ್ಸವ ನಡೆದು ತಂಬಿನಮಕ್ಕಿಯವರೆಗೆ ಮಾರಿಹೋಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಜ. 27ರಂದು ಮೂರುಕಲ್ಲಡ್ಕದಲ್ಲಿ ಸಂಜೆ 6.30ರಿಂದ ಜ. 28ರಂದು ಸಂಜೆ 6.00ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ಜರಗಲಿದೆ. ಬಳಿಕ ಪಟ್ಲ ಸತೀಶ್ ಶೆಟ್ಟಿ ನೇತೃತ್ವದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಯಕ್ಷಗಾನ ಬಯಲಾಟ ನಡೆಯಲಿದೆ.