ಮಡಪ್ಪಾಡಿ ಶಾಲೆಯಲ್ಲಿ 73ನೇ ಗಣರಾಜ್ಯೋತ್ಸವವನ್ನು ವಿದ್ಯುಕ್ತವಾಗಿ ಆಚರಿಸಲಾಯಿತು. ಶಾಲಾ ಮುಖ್ಯಶಿಕ್ಷಕ ಚಂದ್ರಶೇಖರ್ ಪಾರೆಪ್ಪಾಡಿ ಇವರುಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು ಬಳಿಕ ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಮಾಧವ ಶೀರಡ್ಕ ಧ್ವಜಾರೋಹಣಗೈದರು.
ವಿದ್ಯಾರ್ಥಿಗಳು ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಪೋಷಕರು ಇದ್ದರು. ಈ ಸಂದರ್ಭದಲ್ಲಿ ಮಾಧವ ಶಿರಡ್ಕ ಇವರು ಅಂಗನವಾಡಿ ಕೇಂದ್ರಕ್ಕೆ ದತ್ತಿನಿಧಿ ಕೊಡುಗೆ ನೀಡಿದರು.