ಗ್ರಾ.ಪಂ. ಡಿಜಿಟಲ್ ಗ್ರಂಥಾಲಯ ಹಾಗೂ ಪುಸ್ತಕ ಗೂಡು ಉದ್ಘಾಟನೆ
ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಅವರು ಜಾಲ್ಸೂರು ಗ್ರಾಮ ಪಂಚಾಯತಿ ಗ್ರಂಥಾಲಯಕ್ಕೆ ಕಂಪ್ಯೂಟರನ್ನು ಕೊಡುಗೆಯಾಗಿ ನೀಡಿದ್ದು, ಗ್ರಾ.ಪಂ. ಡಿಜಿಟಲ್ ಗ್ರಂಥಾಲಯ ಹಾಗೂ ಜಾಲ್ಸೂರು ಬಸ್ಸು ತಂಗುದಾಣದಲ್ಲಿ ನಿರ್ಮಾಣಗೊಂಡಿರುವ ಪುಸ್ತಕ ಗೂಡನ್ನು ಜ.28ರಂದು ಉದ್ಘಾಟಿಸಿ, ಶುಭಹಾರೈಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ, ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ, ಸುದ್ದಿ ಸಮೂಹ ಮಾಧ್ಯಮ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಪಿ. ಶಿವಾನಂದ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸದಸ್ಯರುಗಳಾದ ಎನ್.ಎಂ. ಸತೀಶ್ ಕೆಮನಬಳ್ಳಿ, ಪಿ.ಆರ್. ಸಂದೀಪ್ ಕದಿಕಡ್ಕ, ಶ್ರೀಮತಿ ತಿರುಮಲೇಶ್ವರಿ ಮರಸಂಕ, ಶ್ರೀಮತಿ ತಿರುಮಲೇಶ್ವರಿ ಅರ್ಭಡ್ಕ , ಶ್ರೀಮತಿ ಸಾವಿತ್ರಿ ಅಡ್ಕಾರುಬೈಲು, ಶ್ರೀಮತಿ ಗೀತಾ ಗೋಪಿನಾಥ್ ಬೊಳುಬೈಲು, ಮುಜೀಬ್ ಪೈಚಾರು, ಶ್ರೀಮತಿ ಗೀತಾ ಚಂದ್ರಹಾಸ ಅರ್ಭಡ್ಕ, ಶ್ರೀಮತಿ ಅಂಬಿಕಾ ಕುಕ್ಕಂದೂರು, ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಮಾಜಿ ಉಪಾಧ್ಯಕ್ಷ ಮಾದವ ಗೌಡ ಕಾಳಮನೆ, ಉದ್ಯಮಿ ಇಬ್ರಾಹಿಂ ಕತ್ತರ್ ಜಾಲ್ಸೂರು, ಸುಳ್ಯ ತಾಲೂಕು ಕ.ಸಾ.ಪ. ಅಧ್ಯಕ್ಷ ಚಂದ್ರಶೇಖರ ಪೇರಾಲು, ಜಾಲ್ಸೂರಿನ ಶ್ರೀ ಸುಬ್ರಹ್ಮಣ್ಯ ಸಂಜೀವಿನಿ ಸಂಘದ ಅಧ್ಯಕ್ಷೆ ಶ್ರೀಮತಿ ವೇದಾ ಹರೀಶ್ ಶೆಟ್ಟಿ, ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಸುಚಿತ್ರ ಕುಕ್ಕಂದೂರು, ರಜತ್ ಅಡ್ಕಾರು, ಗ್ರಂಥಾಲಯ ಎನ್. ಜಿ. ಒ. ಮುರಳೀಧರ , ಸುಬ್ರಹ್ಮಣ್ಯ ಸಂಜೀವಿನಿ ಸಂಘದ ಪದಾಧಿಕಾರಿಗಳಾದ ಶ್ರೀಮತಿ ಸೌಮ್ಯ ಕದಿಕಡ್ಕ, ಶ್ರೀಮತಿ ಸವಿತ ಪೆರುಮುಂಡ, ಚಂದ್ರಕಲಾ ಅಡ್ಕಾರು ಗ್ರಾ.ಪಂ. ಸಿಬ್ಬಂದಿಗಳು ಉಪಸ್ಥಿತರಿದ್ದರು.