18 ವರ್ಷ ವಯಸ್ಸಿನ ನಂತರ ಭಾರತದ ಪ್ರತಿಯೊಬ್ಬ ಪ್ರಜೆಗೂ ಮತದಾನ ಮಾಡುವುದು ಸಂವಿಧಾನ ನೀಡಿದ ಹಕ್ಕಾಗಿದೆ. ಉತ್ತಮ ಸಮಾಜ ಮತ್ತು ದೇಶ ನಿರ್ಮಾಣಕ್ಕೆ ಮತಚಲಾವಣೆ ಪ್ರತಿಯೊಬ್ಬ ಪ್ರಜೆಗಳ ಕರ್ತವ್ಯವಾಗಿದೆ ಎಂದು ಸುಳ್ಯದ ಹಿರಿಯ ಸಿವಿಲ್ ನ್ಯಾಯಾಧೀಶ ಸೋಮಶೇಖರ ಎ ಮತದಾರರ ದಿನವನ್ನು ಉದ್ದೇಶಿಸಿ ಮಾತನಾಡಿದರು. ಅವರು ಇಂದು ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ, ಪೊಲೀಸ್ ಇಲಾಖೆ ಸುಳ್ಯ,ಸುದ್ದಿ ಸಮೂಹ ಮಾಧ್ಯಮ ಕೆಪಿಎಸ್ ಕಾಲೇಜು ಗಾಂಧಿನಗರ ಸುಳ್ಯ ಇವರ ಸಂಯುಕ್ತಾಶ್ರಯದಲ್ಲಿ ಕೆಪಿಎಸ್ ಕಾಲೇಜು ಗಾಂಧಿನಗರ ಸಭಾಂಗಣದಲ್ಲಿ ನಡೆದ ಮತದಾರರ ದಿನ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಮತದಾನದ ಹಕ್ಕಿನ ಕುರಿತು ಜಾಗೃತಿ ಮತ್ತು ಅರಿವನ್ನು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸುಳ್ಯ ಸಹಾಯಕ ಸರ್ಕಾರಿ ಅಭಿಯೋಜಕ ಜನಾರ್ಧನ ಬಿ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಪಿಎಸ್ ಕಾಲೇಜು ಪ್ರಾಂಶುಪಾಲ ಅಬ್ದುಲ್ ಸಮದ್ ಎನ್ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಸುಳ್ಯ ಆರಕ್ಷಕ ವೃತ್ತ ನಿರೀಕ್ಷಕರು ನವೀನ್ ಚಂದ್ರ ಜೋಗಿ, ಕಾಲೇಜು ಅರ್ಥಶಾಸ್ತ್ರ ಉಪನ್ಯಾಸಕ ರಾಜೇಶ್ ಉಪಸ್ಥಿತರಿದ್ದರು.
ಉಪನ್ಯಾಸಕ ಸಂತೋಷ್ ಸ್ವಾಗತಿಸಿ ರಾಜೇಶ್ ಪಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಸುಳ್ಯ ಕಾನೂನು ಸೇವೆಗಳ ಸಮಿತಿ ಸಿಬ್ಬಂದಿಗಳಾದ ರಕ್ಷಿತಾ, ಲಾವಣ್ಯ, ಕಾಲೇಜು ಉಪನ್ಯಾಸಕರು ಸಹಕರಿಸಿದರು.