ಕನಕಮಜಲು ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯು ಗ್ರಾ.ಪಂ. ಅಧ್ಯಕ್ಷ ಶ್ರೀಧರ ಕುತ್ಯಾಳ ಅವರ ಅಧ್ಯಕ್ಷತೆಯಲ್ಲಿ ಜ.28ರಂದು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರುಗಿತು.
ಕನಕಮಜಲು ಗ್ರಾಮದಲ್ಲಿ ಶೇಕಡಾ ನೂರರಷ್ಟು ಕೋವಿಡ್ ಲಸಿಕೆ ನೀಡುವುದು ಹದಿನೈದನೇ ಆಯೋಗದ ಅನುದಾನ ಖರ್ಚು ಮತ್ತು ಗ್ರಾಮದಲ್ಲಿ ವಸತಿ ಯೋಜನೆ ಅನುಷ್ಠಾನದ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ, ಉಪಾಧ್ಯಕ್ಷೆ ಶ್ರೀಮತಿ ದೇವಕಿ ಕುದ್ಕುಳಿ, ಸದಸ್ಯರುಗಳಾದ ರವಿಚಂದ್ರ ಕಾಪಿಲ, ಇಬ್ರಾಹಿಂ ಕಾಸಿಂ ಕಲ್ಲಡ್ಕ, ಶ್ರೀಮತಿ ಸುಮಿತ್ರ ಕುತ್ಯಾಳ, ಶ್ರೀಮತಿ ಶಾರದಾ ಉಗ್ಗಮೂಲೆ, ಶ್ರೀಮತಿ ಪ್ರೇಮಲತಾ ಪಂಜಿಗುಂಡಿ ಉಪಸ್ಥಿತರಿದ್ದರು. ಗ್ರಾ.ಪಂ. ಸಿಬ್ಬಂದಿಗಳು ಸಹಕರಿಸಿದರು.