ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಮೂರುಕಲ್ಲಡ್ಕ ಇದರ ಆಶ್ರಯದಲ್ಲಿ ನಡೆಯುವ ಅಯ್ಯನಕಟ್ಟೆ ಜಾತ್ರೋತ್ಸವದಲ್ಲಿ ಜ. 28ರಂದು ತೋಟದಮೂಲೆಯಿಂದ ರುದ್ರಚಾಮುಂಡಿ ದೈವದ ಕಿರುವಾಲು ಹೊರಟು ಕಲ್ಲಮಾಡದಲ್ಲಿ ನೇಮೋತ್ಸವ ಜರಗಿತು. ಇಂದು ಸಂಜೆ 6.00ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ಬಳಿಕ ಪಟ್ಲ ಸತೀಶ್ ಶೆಟ್ಟಿ ನೇತೃತ್ವದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಯಕ್ಷಗಾನ ಬಯಲಾಟ ನಡೆಯಲಿದೆ.