ಲಂಚ, ಭ್ರಷ್ಟಾಚಾರದ ವಿರುದ್ಧ ಸುದ್ದಿ ಜನಾಂದೋಲನ ವೇದಿಕೆಯ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಲಂಚ, ಭ್ರಷ್ಟಾಚಾರ ವಿರೋಧಿ ಜನಜಾಗೃತಿ ಕಾರ್ಯಕ್ಕೆ ಸಂಪೂರ್ಣ ಬೆಂಬಲ ನೀಡಲು ಸುಳ್ಯ ತಾಲೂಕು ಯಾದವ ಸಭಾ ನಿರ್ಧರಿಸಿದೆ. ಎ.17ರಂದು ಸುಳ್ಯದ ಶಿವಕೃಪಾ ಕಲಾ ಮಂದಿರದಲ್ಲಿ ನಡೆದ ಯಾದವ ಸಭಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತಲ್ಲದೆ, ಎ.22ರಂದು ಸುಳ್ಯ ತಾಲೂಕು ಕಾನೂನು ಮಾಹಿತಿ ಪ್ರಾಧಿಕಾರದ ನೇತೃತ್ವದಲ್ಲಿ, ಜಿಲ್ಲಾಡಳಿತದ ಸಹಕಾರದೊಂದಿಗೆ ಸುದ್ದಿ ಜನಾಂದೋಲನ ವೇದಿಕೆ ಸಹಯೋಗದೊಂದಿಗೆ ನಡೆಯಲಿರುವ ಸುಳ್ಯ ತಾಲೂಕಿನ ಅಧಿಕಾರಿಗಳಿಗೆ ಮತ್ತು ಸಾರ್ವಜನಿಕರಿಗೆ ಕಾನೂನು ಮಾಹಿತಿ ಕಾರ್ಯಾಗಾರ ಹಾಗೂ ಲಂಚ ಭ್ರಷ್ಟಾಚಾರದ ವಿರುದ್ಧವಾಗಿ ನಡೆಯುವ ಜಾಥಾಕ್ಕೆ ಸಂಪೂರ್ಣ ಬೆಂಬಲ ನೀಡುವುದೆಂದು ತೀರ್ಮಾನಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಯಾದವ ಸಭಾ ತಾಲೂಕು ಸಮಿತಿ ಅಧ್ಯಕ್ಷ ಕರುಣಾಕರ ಹಾಸ್ಪಾರೆಯವರು ವಹಿಸಿದ್ದರು. ಯಾದವ ಸಭಾ ಕೇಂದ್ರ ಸಮಿತಿಯ ಸಲಹಾ ಸಮಿತಿ ಅಧ್ಯಕ್ಷ ಸುಧಾಮ ಆಲೆಟ್ಟಿ, ಕೇಂದ್ರ ಸಮಿತಿ ಉಪಾಧ್ಯಕ್ಷ ವಿ.ವಿ.ಬಾಲನ್, ತಾಲೂಕು ಸಮಿತಿ ಉಪಾಧ್ಯಕ್ಷ ಬಾಲಕೃಷ್ಣ ಅಡ್ಡಬೈಲು, ತಾಲೂಕು ಸಮಿತಿ ಕಾರ್ಯದರ್ಶಿ ಕೃಷ್ಣ ಬೆಟ್ಟ, ಕೋಶಾಧಿಕಾರಿ ದಾಮೋದರ ಕೇನಾಜೆ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ರಾಜೀವಿ ಪರ್ಲಿಕಜೆ ಉಪಸ್ಥಿತರಿದ್ದರು. ಸಭೆಯಲ್ಲಿ ಎಲ್ಲಾ ಪ್ರಾದೇಶಿಕ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.