ಸುಳ್ಯ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ಶೋಭರಾಣಿ ಎಂ.ಪಿ. ಏ. 14ರಂದು ಸ್ವಯಂ ನಿವೃತ್ತಿ ಪಡೆದರು.
ಇವರು ಹಾಸನ ಮತ್ತು ಶಿವಮೊಗ್ಗದಲ್ಲಿ ತಮ್ಮ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಮುಗಿಸಿ ಗುಲ್ಬರ್ಗ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ ಪದವಿ ಪಡೆದರು. ಇವರ ಪತಿ ಚಂದ್ರಶೇಖರ ಎಂ.ಎನ್. ಕೆ.ವಿ.ಜಿ. ಪಾಲಿಟೆಕ್ನಿಕ್ ನಲ್ಲಿ ಆಟೊಮೊಬೈಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಪುತ್ರ ಸುಹಾಸ್ ಎಂ.ಸಿ. ಯು.ಎಸ್.ಎ.ಯಲ್ಲಿ ಅಮೆಜಾನ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಪುತ್ರಿ ಶ್ರೇಯಾ ಎಂ.ಸಿ. ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯಾಗಿದ್ದಾರೆ.