ಜಾಲ್ಸೂರು ಗ್ರಾಮ ಪಂಚಾಯತಿ ಮಟ್ಟದ ಶ್ರೀ ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟದ ಆಶ್ರಯದಲ್ಲಿ ಸಂಜೀವಿನಿ ಉತ್ಸವ – ಕ್ರೀಡೋತ್ಸವ 2022 ಜಾಲ್ಸೂರು ಗ್ರಾಮ ಪಂಚಾಯತಿ ವಠಾರದಲ್ಲಿ ಎ.19ರಂದು ಜರುಗಲಿದೆ.
ಕಾರ್ಯಕ್ರಮವನ್ನು ಜಾಲ್ಸೂರು ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ ಉದ್ಘಾಟಿಸಲಿದ್ದಾರೆ. ಶ್ರೀ ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವೇದಾಶೆಟ್ಟಿ ಅಧ್ಯಕ್ಷತೆ ವಹಿಸಿಸಲಿದ್ದಾರೆ ಈ ಸಂದರ್ಭದಲ್ಲಿ ಹಿರಿಯ ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಚೆರಿಯಮ್ಮ ಅವರನ್ನು ಸನ್ಮಾನಿಸಲಾಗುವುದು.
ಅಪರಾಹ್ನ ನಡೆಯುವ ಸಭಾ ಕಾರ್ಯಕ್ರಮವನ್ನು ಜಾಲ್ಸೂರು ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ ಉದ್ಘಾಟಿಸಲಿದ್ದಾರೆ. ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವೇದಾಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ, ಪುತ್ತೂರು ಪೊಲೀಸ್ ನಿರೀಕ್ಷಕರಾದ ಡಾ. ಗಾನ ಪಿ. ಕುಮಾರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ, ತಹಶಿಲ್ದಾರ್ ಕು. ಅನಿತಾಲಕ್ಷ್ಮಿ, ಸಿ.ಡಿ.ಪಿ.ಒ. ಶ್ರೀಮತಿ ರಶ್ಮಿ ಅಶೋಕ್ ನೆಕ್ರಾಜೆ, ಜಿಲ್ಲಾ ಕಾರ್ಯಕ್ರಮ ಸಂಯೋಜಕ ಹರಿಪ್ರಸಾದ್ ಎನ್.ಆರ್.ಎಲ್.ಎಂ. ಉಪಸ್ಥಿತರಿರಲಿದ್ದಾರೆ.
ಸಂಜೀವಿನಿ ಕ್ರೀಡೋತ್ಸವದಲ್ಲಿ ಸಂಜೀವಿನಿ ಮಹಿಳೆಯರಿಗೆ ಹಗ್ಗ ಜಗ್ಗಾಟ, ಲಿಂಬೆ ಚಮಚ, ತಿಲಕ ಹಚ್ಚುವುದು, ಹಣತೆ ಉರಿಸುವುದು, ಸಂಗೀತ ಕುರ್ಚಿ, ಸೂಜಿನೂಲು ಆಟೋಟ ಸ್ಪರ್ಧೆಗಳು ಜರುಗಲಿದ್ದು, ಸಂಜೀವಿನಿ ಒಕ್ಕೂಟದ ಮಹಿಳೆಯರ ಮಕ್ಕಳಿಗೆ ಸಂಗೀತ ಕುರ್ಚಿ, ಲಿಂಬೆ ಚಮಚ, ಕಪ್ಪೆ ಜಿಗಿತ ಸ್ಪರ್ಧೆಗಳು ಜರುಗಲಿದೆ. ಅಪರಾಹ್ನ ಸಮಾರೋಪ ಸಮಾರಂಭದ ಬಳಿಕ ಸಂಜೀವಿನಿ ಬಳಗದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.