ಅರಂತೋಡು ಗ್ರಾಮದ ತೋಟಂಪಾಡಿ ಉಳ್ಳಾಕುಳು ದೈವಸ್ಥಾನದ ಸಂಪರ್ಕರಸ್ತೆಗೆ ಸಚಿವ ಎಸ್. ಅಂಗಾರರ ವಿಶೇಷ ಅನುದಾನದಿಂದ ರೂ.20 ಲಕ್ಷ ವೆಚ್ಚದಲ್ಲಿ ಕಾಂಕ್ರೀಟೀಕರಣ ಕಾಮಗಾರಿ ನಡೆಯುತ್ತಿದೆ.
ಮಾಜಿ ಜಿ.ಪಂ. ಸದಸ್ಯ ಹರೀಶ್ ಕಂಜಿಪಿಲಿ ಗುದ್ದಲಿಪೂಜೆ ನೆರವೇರಿಸಿದ್ದು, ಸಂಪರ್ಕರಸ್ತೆಯ ಕಾಮಗಾರಿ ಪ್ರಗತಿಯಲ್ಲಿದ್ದು, ಇನ್ನು ಕೆಲವೇ ದಿನಗಳಲ್ಲಿ ಕಾಂಕ್ರೀಟಿಕರಣ ಕಾಮಗಾರಿ ಪೂರ್ತಿಗೊಳ್ಳಲಿದೆ ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಅರಂತೋಡು ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಹರಿಣಿ ದೇರಾಜೆ, ಅರಂತೋಡು – ತೊಡಿಕಾನ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಮೇದಪ್ಪ ಉಳುವಾರು, ಗ್ರಾ.ಪಂ. ಸದಸ್ಯ ಶಿವಾನಂದ ಕುಕ್ಕುಂಬಳ, ಸೇರಿದಂತೆ ತೋಟಂಪಾಡಿ ಉಳ್ಳಾಕುಳು ದೈವಸ್ಥಾನದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಗ್ರಾ.ಪಂ. ಸದಸ್ಯ ಕೇಶವ ಅಡ್ತಲೆ ಸ್ವಾಗತಿಸಿ, ತಾ.ಪಂ. ಮಾಜಿ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾಮೇದಪ್ಪ ವಂದಿಸಿದರು.