ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವದ ಪ್ರಯುಕ್ತ ಇಂದು ಬೆಳಿಗ್ಗೆ ದೊಡ್ಡದರ್ಶನ ಬಲಿ ನಡೆಯಿತು.
ಬಳಿಕ ಬಟ್ಟಲು ಕಾಣಿಕೆ ನಡೆಯಿತು. ರಾತ್ರಿ ಬಲಿ ಹೊರಟು ವಾಲಸಿರಿ ಉತ್ಸವ ನಡೆಯಲಿದೆ.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು , ಸದಸ್ಯರು , ಮಾಜಿ ಅಧ್ಯಕ್ಷರು ,ಸದಸ್ಯರು , ದೇವಳದ ಕಾರ್ಯನಿರ್ವಹಣಾಧಿಕಾರಿಗಳು , ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು , ವಿವಿಧ ಸಮಿತಿಗಳ ಪದಾಧಿಕಾರಿಗಳು , ನೂರಾರು ಭಕ್ತರು ಉತ್ಸವದಲ್ಲಿ ಪಾಲ್ಗೊಂಡರು .