*
*ಕಾರ್ಯಕರ್ತರೊಂದಿಗೆ ಸಂವಾದ*
*ಸಾರ್ವಜನಿಕರಿಂದ ಅರ್ಜಿ ಸ್ವೀಕಾರ*
ಗುತ್ತಿಗಾರು ಜಿಲ್ಲಾ ಪಂಚಾಯತ್ ಕ್ಷೇತ್ರದ ನಾಲ್ಕೂರು ಗ್ರಾಮಕ್ಕೆ ಕರ್ನಾಟಕ ಸರಕಾರದ ವಿಧಾನಪರಿಷತ್ ಸದಸ್ಯರುಗಳಾದ ಹರೀಶ್ ಕುಮಾರ್ ಹಾಗೂ ಮಂಜುನಾಥ ಭಂಡಾರಿರವರು ಇಂದು (ಏ.18 ರಂದು) ಭೇಟಿ ನೀಡಿದರು.
ಹಾಲೆಮಜಲಿನ ಶ್ರೀ ವೆಂಕಟೇಶ್ವರ ಸಭಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲ್ಮಕಾರು, ಮಡಪ್ಪಾಡಿ, ಕೊಲ್ಲಮೊಗ್ರ, ಗುತ್ತಿಗಾರು, ನಾಲ್ಕೂರು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರುಗಳು ಸಭೆಯಲ್ಲಿ ಭಾಗವಹಿಸಿದರು.
ತಳಮಟ್ಟದಲ್ಲಿ ಪಕ್ಷ ಸಂಘಟನೆಯ ಬಗ್ಗೆ ಚರ್ಚಿಸಿದರು. ನಂತರ ಸಾರ್ವಜನಿಕರಿಂದ ವಿವಿಧ ಅಭಿವೃದ್ಧಿಗಾಗಿ ಮನವಿಗಳನ್ನು ಸ್ವೀಕರಿಸಿದರು.
ಸರಕಾರದ ಅನುದಾನದ ಲಭ್ಯತೆಯ ಮೇರೆಗೆ ಹಾಗೂ ಆದ್ಯತೆ ಮೇರೆಗೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮಂಜುನಾಥ ಭಂಡಾರಿ ಅವರು ತಿಳಿಸಿದರು.
ಅವರೊಂದಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ, ಕೃಷ್ಣಪ್ಪ ಕಡಬ, ಡಾ.ರಘು, ಸೇರಿದಂತೆ ಅನೇಕ ಮುಖಂಡರುಗಳು ಉಪಸ್ಥಿತರಿದ್ದರು. ದಿನೇಶ್ ಅಂಬೆಕಲ್ಲು ಸ್ವಾಗತಿಸಿ, ವಂದಿಸಿದರು.
ಈ ಸಂದರ್ಭದಲ್ಲಿ ಕೊಲ್ಲಮೊಗ್ರು ಹರಿಹರ ಸಿ.ಎ ಬ್ಯಾಂಕ್ ನ ಅಧ್ಯಕ್ಷ ವಿನೂಪ್ ಮಲ್ಲಾರ ಸೇರಿದಂತೆ ಅನೇಕ ಮಂದಿ ಕಾಂಗ್ರೆಸ್ ಸೇರ್ಪಡೆಗೊಂಡರು.