ಸಮಸ್ತ ವಿದ್ಯಾಭ್ಯಾಸ ಮಂಡಳಿ ನಡೆಸಿದ 2022ನೇ ಸಾಲಿನ ಮದ್ರಸ ಪಬ್ಲಿಕ್ ಪರೀಕ್ಷೆಯಲ್ಲಿ ಬೆಳ್ಳಾರೆ ಮದ್ರಸ ನೂರು ಶೇಕಡಾ ಫಲಿತಾಂಶ ಗಳಿಸಿದೆ. 5, 7, 10, +2 ತರಗತಿಗಳಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ಮೂರು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ ಏಳು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು ಸತತ ಐದನೇ ಬಾರಿ ಮದ್ರಸ ನೂರು ಶೇಕಡಾ ಫಲಿತಾಂಶ ಗಳಿಸುವ ಮೂಲಕ ಉತ್ತಮ ಸಾಧನೆ ಗಳಿಸಿದೆ ಎಂದು ಸದರ್ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ತಿಳಿಸಿದ್ದಾರೆ.