ಶ್ರೀ ಮಂಜುನಾಥೇಶ್ವರ ಜಾನಪದ ಕಲಾಸಂಘ ಬಾಳಿಲ-ಮುಪ್ಪೇರ್ಯ ಇದರ ಆಶ್ರಯದಲ್ಲಿ ಊರವರ ಹಾಗೂ ಪರವೂರವರ ಸಹಕಾರದೊಂದಿಗೆ ಸಸಿಹಿತ್ಲು ಶ್ರೀ ಭಗವತೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಮಂಗಳೂರು ಇವರಿಂದ ಕಾಂತು ಬಾಳಿಲ ವಿರಚಿತ ಯಕ್ಷಗಾನ ಬಯಲಾಟ ಅಜಪಿಲ ಕ್ಷೇತ್ರ ಮಹಾತ್ಮೆ – ಬುಲೇರಿದ ತುಡರ್ ಏ. 22ರಂದು ಸಂಜೆ 7.00 ಗಂಟೆಯಿಂದ ಬೆಳ್ಳಾರೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿದೆ. ಬೆಳಿಗ್ಗೆ 9.00 ಗಂಟೆಗೆ ಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ, ಅಪರಾಹ್ನ 2.00 ಗಂಟೆಯಿಂದ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಜರಗಲಿದೆ. ಸಂಜೆ 6.00 ಗಂಟೆಯಿಂದ ಆರ್.ಕೆ. ಭಟ್ ಕುರುಂಬುಡೇಲುರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಪಿ.ಜಿ.ಎಸ್.ಎನ್. ಪ್ರಸಾದ್, ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ಶ್ರೀಮತಿ ಸುಹಾನ, ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ ಪನ್ನೆ, ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಸುನಿಲ್ ರೈ ಪುಡ್ಕಜೆ, ಸಾಮಾಜಿಕ ಕಾರ್ಯಕರ್ತ ಯತೀಶ್ ಆರ್ವಾರ, ಬೆಳ್ಳಾರೆ ಜೇಸಿಐ ಅಧ್ಯಕ್ಷೆ ಶ್ರೀಮತಿ ನಿರ್ಮಲಾ ಜಯರಾಮ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣೆಯಿಂದ ಕಡಬ ಠಾಣೆಗೆ ವರ್ಗಾವಣೆಗೊಂಡ ಆಂಜನೇಯ ರೆಡ್ಡಿಯವರಿಗೆ ಮತ್ತು ಯಕ್ಷಗಾನ ಭಾಗವತರಾದ ಶಶಾಂಕ್ ಎಲಿಲೆಯವರಿಗೆ ಗೌರವಾರ್ಪಣೆ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ಯಕ್ಷಗಾನ ಬಯಲಾಟ ನಡೆಯಲಿದೆ.