2021 ರಲ್ಲಿ ಪರಿವಾರಕಾನದಲ್ಲಿ ನಡೆದ ಅಪಘಾತ ಪ್ರಕರಣ ದಲ್ಲಿ ಮಹಿಳೆ ಮೃತಪಟ್ಟ ಘಟನೆಯ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ತೀರ್ಪು ನೀಡಿದೆ.
2021 ಜ.4 ರಂದು ಆಲೆಟ್ಟಿ ಗ್ರಾಮದ ಪರಿವಾರಕಾನ ಎಂಬಲ್ಲಿ ಚಿನ್ನಸ್ವಾಮಿ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಕೆ.ಎ. 10 ಎ. 1445 ನೇ ನಂಬರಿನ ಲಾರಿಯನ್ನು ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬೆಳಗ್ಗೆ ಜಾವ ಚಲಾಯಿಸಿಕೊಂಡು ಬರುತ್ತಿದ್ದಾಗ ಆಲೆಟ್ಟಿ ಗ್ರಾಮದ ಪರಿವಾರಕಾನ ಮುಖ್ಯರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಶ್ರೀಮತಿ ಅಮ್ಮಣ್ಣಿ ಎಂಬವರಿಗೆ ಲಾರಿ ಡಿಕ್ಕಿಯಾಗಿ, ಗಂಭೀರ ಗಾಯಗೊಂಡ ಮಹಿಳೆ ಮೃತಪಟ್ಟಿದ್ದರು. ಈ ಪ್ರಕರಣ ಸುಳ್ಯ ಪೋಲೀಸ್ ಠಾಣೆಯಲ್ಲಿ ದಾಖಲಾಗಿ ಲಾರಿ ಚಾಲಕನ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಲಾಗಿತ್ತು. ಇದರ ವಿಚಾರಣೆಯು ಸುಳ್ಯ ನ್ಯಾಯಾಲಯದಲ್ಲಿ ನಡೆದು ವಾದ – ಪ್ರತಿವಾದ ಆಲಿಸಿದ ನ್ಯಾಯಾಧೀಶರು ಆರೋಪಿ ಚಿನ್ನಸ್ವಾಮಿಯನ್ನು ಖುಲಾಸೆಗೊಳಿಸಿ ತೀರ್ಪು ನೀಡಿರುವುದಾಗಿ ತಿಳಿದು ಬಂದಿದೆ.
ಆರೋಪಿ ಪರ ವಕೀಲರಾದ ಎಸ್.ಕೆ. ವಿನಯ್ ಸೋಣಂಗೇರಿ ವಾದಿಸಿದ್ದಾರೆ.