ಸರಕಾರಿ ನೌಕರರ ಸಂಘದ ದ.ಕ. ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ದಿನಾಚರಣೆ ಯು ಎ.21 ರಂದು ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ಭಾಗವಹಿಸುವ ನೌಕರರಿಗೆ ಅರ್ಧ ದಿನದ ಓಓಡಿ ಸೌಲಭ್ಯವಿದೆ. ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಸರಕಾರಿ ನೌಕರರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ತೀರ್ಥ ರಾಮ ಹೊಸೊಳಿಕೆ ವಿನಂತಿಸಿದ್ದಾರೆ.