ಹಿರಿಯ ಸಾಹಿತಿ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಸ್ಥಾಪಕಾಧ್ಯಕ್ಷ ಟಿ. ಜಿ. ಮುಡೂರು
ಅವರ ನಿಧನಕ್ಕೆ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಶ್ರೀನಾಥ್ ಎಂ.ಪಿ. ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ್ ಪೇರಾಲ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ ಇವರು ಮೃತರ ಅಂತಿಮ ದರ್ಶನ ನಡೆಸಿ ಅವರ ಅಗಲಿಕೆಯ ನೋವನ್ನು ಸಹಿಸಲು ಮೃತರ ಕುಟುಂಬದ ಸದಸ್ಯರಿಗೆ
ಸಾಂತ್ವನವನ್ನು ತಿಳಿಸಿರುತ್ತಾರೆ. ಹಾಗೂ ಇವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ಅಪಾರ ನಷ್ಟವಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.