ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಸುಳ್ಯ ವಿಧಾನ ಸಭಾ ಕ್ಷೇತ್ರದ ವತಿಯಿಂದ ಸರ್ಕಾರದ ಅನಿಯಂತ್ರಿತ ಬೆಲೆ ಏರಿಕೆಯ ವಿರುದ್ಧ ಅಂಕತ್ತಡ್ಕ ಜಂಕ್ಷನ್ ನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು.
ಅಣಕು ಪ್ರದರ್ಶನದ ಮೂಲಕ ಪ್ರತಿಭಟನಾ ಸಭೆಯನ್ನು ಆರಂಭಿಸಲಾಯಿತು.
ವಿಮೆನ್ ಇಂಡಿಯಾ ಮೂವ್ಮೆಂಟ್ ದಕ್ಷಿಣಕನ್ನಡ ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರಕಾರದ ಜನವಿರೋಧಿ ನೀತಿಯಿಂದ ಹಾಗೂ ಅನಿಯಂತ್ರಿತ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಬದುಕಲು ಕಷ್ಟವಾಗಿದೆ ಈ ಸರಕಾರವನ್ನು ದೇಶದಿಂದ ನಿರ್ಮೂಲನೆ ಮಾಡಬೇಕು ಎಂದರು. ಪ್ರತಿಭಟನೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರಾಧ್ಯಕ್ಷೆ ಸಬೀನಾ ಅಂಕತ್ತಡ್ಕ ಸ್ವಾಗತಿಸಿ, ಕಾರ್ಯದರ್ಶಿ ಅನ್ ಶಿಫಾ ಬೆಳ್ಳಾರೆ ನಿರೂಪಿಸಿದರು. ಪ್ರತಿಭಟನೆಯಲ್ಲಿ ತಾಲೂಕು ಸಮಿತಿ ಸದಸ್ಯರಾದ ಸಮೀನಾ ಬೆಳ್ಳಾರೆ, ಮಿಸ್ರಿಯಾ ಅಂಕತಡ್ಕ ಮತ್ತಿತರರು ಉಪಸ್ಥಿತರಿದ್ದರು.