Breaking News

ಮೇ.3 ರಂದು ಶ್ರೀಕೇಶವ ಕೃಪಾ ವೇದ ಯೋಗ ಕಲಾ ಶಿಬಿರದ ಸಮಾಪನ ಮತ್ತು ಸಾಧಕರಿಗೆ ಶ್ರೀ ಕೇಶವಸ್ಮೃತಿ ಪ್ರಶಸ್ತಿ ಪ್ರದಾನ ಸಮಾರಂಭ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಸುಳ್ಯ ಹಳೆಗೇಟು ವಿದ್ಯಾನಗರದ ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ‌ ನಡೆಯು ತ್ತಿರುವ ಶ್ರೀಕೇಶವ ಕೃಪಾ ವೇದ ಯೋಗ ಕಲಾ ಶಿಬಿರದ ಸಮಾಪನ ಮತ್ತು ಸಾಧಕರಿಗೆ ಶ್ರೀ ಕೇಶವ ಸ್ಮೃತಿ ಪ್ರಶಸ್ತಿ ಪ್ರದಾನ ಸಮಾರಂಭ ಮೇ.3 ರಂದು ಕೇಶವಕೃಪಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಶ್ರೀ ಕೇಶವ ವೇದ ಮತ್ತು ಕಲಾ ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ತಿಳಿಸಿದ್ದಾರೆ.
ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ವೇದ ಯೋಗ ಮತ್ತು ಕಲೆಗಳ ಉಳಿವಿಗಾಗಿ ತನ್ನದೇ ಕೊಡುಗೆ ಯನ್ನು ನೀಡುತ್ತಿರುವ ಸುಳ್ಯದ ಶ್ರೀಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನವು ಪ್ರತಿ ವರ್ಷ ಬೇಸಿಗೆ ರಜೆಯಲ್ಲಿ ಸುಮಾರು ಒಂದು ತಿಂಗಳ ವೇದ ಯೋಗ ಕಲಾ ಶಿಬಿರವನ್ನು ಆಯೋಜಿಸುತ್ತಿದ್ದು , ಈ ವರ್ಷದ ಶಿಬಿರವು ಏಪ್ರಿಲ್ 12 ರಿಂದ ಆರಂಭಗೊಂಡಿದ್ದು ಮೇ 3 ರಂದು ಸಮಾಪನಗೊಳ್ಳಲಿದೆ. ರಾಜ್ಯ ಮತ್ತು ಹೊರರಾಜ್ಯದ 120 ಶಿಬಿರಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಶಿಬಿರದ ಸಂಚಾಲಕ ಅಭಿರಾಮ ಶರ್ಮಾ ಮಾತನಾಡಿ ಮೇ 3 ರಂದು ಅ‌‌.3ರಿಂದ ಶಿಬಿರದ ಸಮಾರೋಪ ಸಮಾರಂಭ ನಡೆಯಲಿದೆ. ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಪುತ್ತೂರಿನ ಸ್ವರ್ಣೋದ್ಯಮಿ ಹಾಗು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ‌ ಸಮಿತಿಯ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಬಂದರು, ಮೀನುಗಾರಿಕೆ , ಒಳನಾಡು ಜಲಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರ ಶ್ರೀ ಕೇಶವ ಸ್ಮೃತಿ ಪ್ರಶಸ್ತಿ ಪ್ರದಾನ‌‌ ಮಾಡಿ ಸಾಧಕರನ್ನು ಸನ್ಮಾನಿಸುವರು. ಸಂಸ್ಕೃತ ಉಪನ್ಯಾಸಕ ಪಿ.ವಿ.ಶ್ರೀಹರಿ ಶರ್ಮಾ ಪಾದೆಕಲ್ಲು ಅಭಿನಂದನಾ ಭಾಷಣ ಮಾಡಲಿದ್ದಾರೆ. ವೇದಿಕೆಯಲ್ಲಿ ಪ್ರತಿಷ್ಠಾನದ ಗೌರವಾಧ್ಯಕ್ಷ ಶ್ರೀ ಗೋಪಾಲಕೃಷ್ಣ ಭಟ್ ವಗೆನಾಡು ಉಪಸ್ಥಿತರಿದ್ದು ಶುಭಹಾರೈಸಲಿದ್ದಾರೆ. ಪ್ರತಿವರ್ಷ ಪ್ರತಿಷ್ಠಾನದ ವತಿಯಿಂದ ವೇದ , ಯೋಗ ಮತ್ತು ಕಲಾ ಕ್ಷೇತ್ರದಿಂದ ಆರಿಸಿದ ಮೂವರು ಸಾಧಕರಿಗೆ ಶ್ರೀ ಕೇಶವ ಸ್ಮೃತಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುತ್ತಿದ್ದು ಈ ಬಾರಿ ಜ್ಯೋತಿಷ್ಯ ಕ್ಷೇತ್ರದಿಂದ ಬ್ರಹ್ಮಶ್ರೀ ಶ್ರೀಧರ ಗೋರೆ , ಯೋಗ ಕ್ಷೇತ್ರದಿಂದ ಆರ್.ವಿ. ಭಂಡಾರಿ ಬೆಂಗಳೂರು, ಕಲಾ ಕ್ಷೇತ್ರದಿಂದ ಸಂಗೀತ ವಿದ್ಯಾಂಸ ಯಜ್ಞೇಶ್ ಆಚಾರ್ ಸುಬ್ರಹ್ಮಣ್ಯ ಇವರಿಗೆ ಶ್ರೀಕೇಶವ ಸ್ಮೃತಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅವರು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಸರಣಿ ಶಿವಪೂಜಾ ಅಭಿಯಾನದ ಸಂಚಾಲಕ ಗೋಪಾಲಕೃಷ್ಣ ಭಟ್ ಉಬರಡ್ಕ ಹಾಗು ಯೋಗ ಗುರು ಎಂ.ಎಸ್.ನಾಗರಾಜ ರಾವ್ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.