Breaking News

ಮೇ.25 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಳ ಸಾಮೂಹಿಕ ವಿವಾಹ, ಮೇ.೪ ಅರ್ಜಿ ಸಲ್ಲಿಸಲು ಕೊನೆಯ ದಿನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೇ. 25 ರಂದು ಸರಳ ಸಾಮೂಹಿಕ ವಿವಾಹ ನಡೆಯಲಿದೆ.

ಕುಕ್ಕೆ ದೇವಳದಲ್ಲಿ ಸಾಮೂಹಿಕ ವಿವಾಹವಾಗಲು ಬಯಸುವವರು ಶ್ರೀ ದೇವಳದ ಕಚೇರಿಯಿಂದ ಅರ್ಜಿ ಫಾರಂ ಪಡೆದು ತಮ್ಮ ಅರ್ಜಿಯನ್ನು ಶ್ರೀ ದೇವಳಕ್ಕೆ ಸಲ್ಲಿಸಬಹುದು. 08257-281224, 236200, 281700, 281423 ಕರೆ ಮಾಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.ಅಥವಾ ಶ್ರೀ ದೇವಳದ ಕಚೇರಿ ವೇಳೆಯಲ್ಲಿ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.
ಮೇ.೨೫ರಂದು ಬೆಳಗ್ಗೆ ೧೦.೫೦ ರಿಂದ ೧೧.೪೦ರ ವರೆಗೆ ನೆರವೇರುವ ಕಟಕ ಲಗ್ನ ಸುಮೂಹುರ್ತದಲ್ಲಿ ವಿವಾಹ ನೆರವೇರಲಿದೆ.ಮೇ.೪ ವಧು-ವರರು ನಿಗದಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು.ಮೇ.೮ರಂದು ನೋಂದಾಯಿತ ವಧು-ವರರ ವಿವರಗಳನ್ನು ದೇವಳದಲ್ಲಿ ಪ್ರಕಟಿಸಲಾಗುವುದು.ಮೇ.೧೩ ಅಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕವಾದರೆ, ಮೇ.೧೫ರಂದು ವಧುವರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.
ವಧು-ವರರು ತಮ್ಮ ಪೂರ್ಣ ವಿಳಾಸದೊಂದಿಗೆ ಜನನ ದಿನಾಂಕವನ್ನು ದೃಢೀಕರಿಸುವ ಶಾಲಾ ದೃಢಪತ್ರ ಪ್ರತಿ, ಪಾಸ್‌ಪೋರ್ಟ್ ಸೈಜ್‌ನ ೨ ಪೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ವಧು-ವರರ ಬ್ಯಾಂಕ್ ಖಾತೆ ಸಂಖ್ಯೆಯ ದಾಖಲೆ ಪ್ರತಿ, ಅವಿವಾಹಿತರು ಎಂಬುದಾಗಿ ಪಂಚಾಯತ್‌ನಿಂದ ಅಥವಾ ಸಂಬಂಧಪಟ್ಟ ಸರಕಾರಿ ಇಲಾಖಾಧಿಕಾರಿಗಳಿಂದ ದೃಢಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.ಸರಳ ಸಾಮೂಹಿಕ ವಿವಾಹವಾಗುವ ವಧುವಿಗೆ ಕಂದಾಯ ಇಲಾಖೆಯ ವತಿಯಿಂದ ಆದರ್ಶ ವಿವಾಹ ಯೋಜನೆಯಡಿ ರೂ.೧೦ ಸಾವಿರ ನಿಶ್ಚಿತ ಠೇವಣಿ ಸೌಲಭ್ಯವನ್ನು ಒದಗಿಸಲಾಗುವುದು. ವಿವಾಹವಾಗುವ ಪರಿಶಿಷ್ಠ ಜಾತಿಯ ಜೋಡಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸರಳ ವಿವಾಹ ಯೋಜನೆಯಡಿ ರೂ.೫೦ ಸಾವಿರಗಳನ್ನು ಒದಗಿಸಲಾಗುವುದು.
ಸರಳ ವಿವಾಹವಾಗುವ ವರನಿಗೆ ಶ್ರೀ ದೇವಳದಿಂದ ಪ್ರೋತ್ಸಾಹ ಧನವಾಗಿ ರೂ.೫ ಸಾವಿರ ಹಾಗೂ ವಧುವಿಗೆ ರೂ.೧೦ ಸಾವಿರ ನೀಡಲಾಗುವುದು. ಸುಮಾರು ರೂ ೪೦ ಸಾವಿರ ಮೌಲ್ಯದಲ್ಲಿ ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡನ್ನು ದೇವಾಲಯದಿಂದ ಭರಿಸಲಾಗುವುದು. ಸಾಮೂಹಿಕ ಸರಳ ವಿವಾಹಕ್ಕೆ ಆಗಮಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಹಾಗೂ ಸಾರ್ವಜನಿಕರಿಗೆ ಊಟೋಪಚಾರ ಹಾಗೂ ಆವಶ್ಯಕ ವ್ಯವಸ್ಥೆಗಳನ್ನು ದೇವಳದಿಂದ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.